ಹೊಸಪೇಟೆ:ಭ್ರಷ್ಟ ವ್ಯವಸ್ಥೆಯನ್ನು ವಿರೋಧಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಚಲಿಸು ಕರ್ನಾಟಕ ಎಂಬ ಘೋಷ ವಾಕ್ಯದೊಂದಿಗೆ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ.ಯ. ಗಣೇಶ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯವು ಕೊರೊನಾದಿಂದ ನಲುಗಿ ಹೋಗಿದೆ. ಅಲ್ಲದೆ ಭ್ರಷ್ಟ ರಾಜಕೀಯ ಮತ್ತು ಆಡಳಿತ ವ್ಯವಸ್ಥೆಯಿಂದ ಕಳೆದ ಕೆಲವು ದಶಕಗಳಿಂದ ನಿರಂತರವಾಗಿ ಜನರು ತತ್ತರಿಸಿ ಹೋಗಿದ್ದಾರೆ. ಈ ಭ್ರಷ್ಟ ವ್ಯವಸ್ಥೆಯಿಂದ ನಾಡಿನ ಮತ್ತು ಜನರ ಸಂಪತ್ತು ಲೂಟಿಯಾಗುತ್ತಿದೆ. ಕೊರೊನಾ ಸೋಂಕು ನಮ್ಮಲ್ಲಿನ ಅವ್ಯವಸ್ಥೆ ಮತ್ತು ಅಕ್ರಮಗಳನ್ನು ಹೊರ ಹಾಕಿದೆ. ಅದರಲ್ಲೂ ಆರೋಗ್ಯ ಮತ್ತು ಆಡಳಿತ ವ್ಯವಸ್ಥೆಗಳು ಯಾವ ಮಟ್ಟದಲ್ಲಿ ಅಧೋಗತಿಗೆ ತಲುಪಿದೆ ಎಂದು ತೋರಿಸಿದೆ. ಹಾಗಾಗಿ ಇದರ ಹೋರಾಟದ ಭಾಗವಾಗಿ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.