ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ಗಂಗಲಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬನ ಅನುಮಾನಾಸ್ಪದ ಸಾವಿನ ಹಿನ್ನೆಲೆ ದಲಿತ ವ್ಯಕ್ತಿಗೆ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಪ್ರಕರಣ ನಡೆದಿದೆ. ಹೀಗಾಗಿ, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಕಳೆದ ವಾರದ ಹಿಂದೆ ಎಂ. ಗಂಗಲಾಪುರ ಗ್ರಾಮದ ಅಂಜನೇಯ ಎನ್ನುವ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಯ ಮಾಯಣ್ಣ ಎಂಬುವರನ್ನು ಅರೆ ಬೆತ್ತಲೆಗೂಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಲಾಗಿದೆ. ಥಳಿಸಿದ್ದಷ್ಟೇ ಅಲ್ಲದೇ ಮಾಯಣ್ಣ ಕುಟುಂಬಕ್ಕೆ ಬೆದರಿಕೆ ಹಾಕಿರುವುದು ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪ್ರಕರಣ ಹಿನ್ನೆಲೆ ನೋಡುವುದಾದರೆ ಮೃತ ಆಂಜನೇಯ ಮತ್ತು ಮಾಯಣ್ಣ ಮಧ್ಯೆ ಭಿನ್ನಾಭಿಪ್ರಾಯವಿತ್ತು ಎನ್ನಲಾಗ್ತಿದೆ.