ಕರ್ನಾಟಕ

karnataka

ETV Bharat / state

ಹಥ್ರಾಸ್​ ಅತ್ಯಾಚಾರ ಪ್ರಕರಣ ಖಂಡಿಸಿ ಹೊಸಪೇಟೆಯಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ

ಯುಪಿಯ ಹಥ್ರಾಸ್ ಘಟನೆಯನ್ನು ಖಂಡಿಸಿ ಹೊಸಪೇಟೆಯಲ್ಲಿ ವಿವಿಧ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಯೋಗಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿವೆ.

Dalit organizations protest in Hosapeta condemning the Hathras rape case
ಹೊಸಪೇಟೆಯಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ

By

Published : Oct 9, 2020, 2:02 PM IST

ಹೊಸಪೇಟೆ (ಬಳ್ಳಾರಿ):ಉತ್ತರಪ್ರದೇಶದ ಹಥ್ರಾಸ್​​​​ನಲ್ಲಿನ ನಡೆದ ಅತ್ಯಾಚಾರ‌ವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಕರ್ನಾಟಕ ದಲಿತಾ ಮಹಿಳಾ ಸಂಘಟನೆ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಇಲ್ಲಿನ ಅಂಬೇಡ್ಕರ್​​ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ರೋಟರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಉತ್ತರಪ್ರದೇಶದ ಯೋಗಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹೊಸಪೇಟೆಯಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ

ಮೇಲ್ವವರ್ಗದ ನಾಲ್ವರು ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ. ‌ಆದರೆ ಯೋಗಿ ಸರ್ಕಾರ ಆರೋಪಿಗಳ ರಕ್ಷಣೆ ಮಾಡಲು ರಾತ್ರೋರಾತ್ರಿ ಯುವತಿ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಿದೆ.

ಬಿಜೆಪಿ ಸರ್ಕಾರ ಆಡಳಿತ ಇರುವ ರಾಜ್ಯಗಳಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ದಲಿತ, ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲದಂತಾಗಿದೆ. ಕೂಡಲೇ ಯೋಗಿ ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಡಳಿತವನ್ನು ಹೇರಬೇಕು ಎಂದು ಆಗ್ರಹಿಸಿದ್ದಾರೆ.

ABOUT THE AUTHOR

...view details