ಬಳ್ಳಾರಿ:ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 25 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅವರು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅವರಿಗೆ ಮನವಿ ಮಾಡಿದ್ದಾರೆ.
ಬುಡಾಗೆ 25 ಕೋಟಿ ರೂ. ವಿಶೇಷ ಅನುದಾನ ನೀಡಲು ನಗರಾಭಿವೃದ್ಧಿ ಸಚಿವರಿಗೆ ಮನವಿ
ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅವರು ಇಂದು ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ ಭೇಟಿ ಮಾಡಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.
Bhyrati Basavaraj
ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವರನ್ನು ಭೇಟಿಯಾದ ಬುಡಾ ಅಧ್ಯಕ್ಷ ದಮ್ಮೂರು ಅವರು, ಬಳ್ಳಾರಿ ನಗರಕ್ಕೆ ಅಗತ್ಯವಿರುವ 25 ಉದ್ಯಾನವನಗಳನ್ನು, 25 ಶುದ್ಧ ನೀರಿನ ಘಟಕಗಳನ್ನು, 25 ಸ್ವಾಗತ ಫಲಕ ಹಾಗೂ 25 ಬಸ್ ತಂಗುದಾಣಗಳನ್ನು ನಿರ್ಮಿಸಲು ವಿಶೇಷ ಅನುದಾನದಡಿಯಲ್ಲಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 25 ಕೋಟಿ ರೂಪಾಯಿಗಳನ್ನು ನೀಡಬೇಕೆಂದು ಅವರು ಮನವಿ ಮಾಡಿಕೊಂಡರು.
ದಮ್ಮೂರು ಅವರ ಮನವಿಯನ್ನು ಆಲಿಸಿದ ಸಚಿವ ಭೈರತಿ ಸಕರಾತ್ಮಕವಾಗಿ ಸ್ಪಂದಿಸಿದರು.