ಬಳ್ಳಾರಿ:ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 50:50 ಅನುಪಾತದಲ್ಲಿ ತಾಲೂಕಿನ ಗೊನಾಳು ಗ್ರಾಮದಲ್ಲಿ 101 ಎಕರೆ ವಿಸ್ತೀರ್ಣ ಜಮೀನಿನಲ್ಲಿ ವಸತಿ ಯೋಜನೆ ಅಭಿವೃದ್ಧಿ ಪಡಿಸುತ್ತಿದ್ದು, ಈ ಯೋಜನೆಯಲ್ಲಿ ಮಾಧ್ಯಮದವರಿಗೆ ಶೇ.5ರಷ್ಟು ಮೀಸಲಿಡುವುದಕ್ಕೆ ಸಂಬಂಧಿಸಿದಂತೆ ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಸಿಎಂ ಜೊತೆ ಚರ್ಚೆ ನಡೆಸಿದರು.
ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅವರು ಗೋನಾಳ ವಸತಿ ಯೋಜನೆ ಸೇರಿ ವಿವಿಧ ವಸತಿ ಯೋಜನೆಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು.