ಬಳ್ಳಾರಿ:ಕೇಂದ್ರ ರೈಲ್ವೆ ಇಲಾಖೆ ಸಹಾಯಕ ಸಚಿವರಾದ ಸುರೇಶ್ ಅಂಗಡಿ ಅವರನ್ನು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಮ್ಮೂರು ಶೇಖರ್ ಅವರು ಭೇಟಿಯಾಗಿ ಬಳ್ಳಾರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.
ಸುರೇಶ್ ಅಂಗಡಿ ಭೇಟಿ ಮಾಡಿ ಮನವಿ ಸಲ್ಲಿಸಿದ ದಮ್ಮೂರು ಶೇಖರ್
ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಮ್ಮೂರು ಶೇಖರ್ ಅವರು ಕೇಂದ್ರ ರೈಲ್ವೆ ಇಲಾಖೆ ಸಹಾಯಕ ಸಚಿವ ಸುರೇಶ್ ಅಂಗಡಿ ಭೇಟಿ ಮಾಡಿ ಬಳ್ಳಾರಿ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.
Minister Suresh Angadi
ಸಚಿವ ಸುರೇಶ್ ಅಂಗಡಿ ಅವರನ್ನು ಸನ್ಮಾನಿಸಿದ ದಮ್ಮೂರು ಶೇಖರ್ ಅವರು ಬಳ್ಳಾರಿಯ ಮೋತಿ ಸರ್ಕಲ್ ಫ್ಲೈ ಓವರ್, ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರದ ರೈಲ್ವೆ ಸುರಂಗ ಮಾರ್ಗ, ಸುಧಾ ಕ್ರಾಸ್ ಫ್ಲೈ ಓವರ್ ಹಾಗೂ ಇತರೆ ರೈಲ್ವೆ ಕಾಮಗಾರಿಗಳ ಬಗ್ಗೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಇದೇ ವೇಳೆ ಬಳ್ಳಾರಿ ಅಭಿವೃದ್ಧಿಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.