ಹೊಸಪೇಟೆ (ಬಳ್ಳಾರಿ):ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹೊಸಪೇಟೆ ಬಸ್ ನಿಲ್ದಾಣಕ್ಕೆ ಶುಕ್ರವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣದಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಪ್ರಯಾಣಿಕರೊಂದಿಗೆ ಮಾತನಾಡಿ ತಿಳಿದುಕೊಂಡರು.
ಹೊಸಪೇಟೆ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ - DCM Laxman savadi visited hospete bus stand
ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಬಸ್ ನಿಲ್ದಾಣಗಳಲ್ಲಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ತಿಳಿಯಲು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಇಂದು ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹೊಸಪೇಟೆ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
![ಹೊಸಪೇಟೆ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ DCM Laxman savadi](https://etvbharatimages.akamaized.net/etvbharat/prod-images/768-512-7307469-300-7307469-1590156657508.jpg)
ಪ್ರಯಾಣಿಕರ ಆರೋಗ್ಯದ ಹಿತದೃಷ್ಟಿಯಿಂದ ಸ್ಯಾನಿಟೈಜರ್, ಮಾಸ್ಕ್ಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಿದರು. ಸಾಮಾಜಿಕ ಅಂತರ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಸ್ ನಿಲ್ದಾಣದಲ್ಲಿ ಕೈಗೊಳ್ಳಲಾದ ಸಿದ್ಧತೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಆಟೋ ಚಾಲಕರಿಗೆ ಮುಂದಿನ ದಿನಗಳಲ್ಲಿ ಸಹಾಯಧನ ವಿತರಿಸುವ ಯೋಜನೆ ಹಮ್ಮಿಕೊಂಡಿದ್ದು,ಅದೇ ರೀತಿಯಾಗಿ ನಿಯಮಗಳನ್ನು ಅನುಸರಿಸಿಕೊಂಡು ರಾತ್ರಿ ಸಾರಿಗೆ ಸಂಚಾರದ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಕೆಲವೇ ದಿನಗಳಲ್ಲಿ ರಾತ್ರಿ ಪ್ರಯಾಣಕ್ಕೂ ಅವಕಾಶ ಕಲ್ಪಿಸಲಾಗುತ್ತದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ವಿಭಾಗೀಯ ಅಧಿಕಾರಿ ಸೀನಯ್ಯ, ಸಿಬ್ಬಂದಿ ಹಾಗೂ ಅಧಿಕಾರಿಗಳು ಹಾಜರಿದ್ದರು.