ಬಳ್ಳಾರಿ: ಜಮೀನಿನಲ್ಲಿ ಮರವೊಂದಕ್ಕೆ ಹಲವು ದಿನಗಳ ಹಿಂದೆಯೇ ವ್ಯಕ್ತಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಹುಲಿಕಟ್ಟಿ ಗ್ರಾಮದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ - ಹರಪನಹಳ್ಳಿ ತಾಲೂಕಿನ ಹುಲಿಕಟ್ಟಿ ಗ್ರಾಮ
ಹರಪನಹಳ್ಳಿ ತಾಲೂಕಿನ ಹುಲಿಕಟ್ಟಿ ಗ್ರಾಮದ ಗೋಣೆಪ್ಪ ಎಂಬ ರೈತನ ಜಮೀನಿನ ತುಗ್ಗು ಪ್ರದೇಶದ ಮರದಲ್ಲಿ ನೈಲಾನ್ ಹಗ್ಗದಿಂದ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡಿದ್ದು, ಆತನ ದೇಹ ಸಂಪೂರ್ಣ ಕೊಳೆತು ಹೋಗಿದೆ.
ಹರಪನಹಳ್ಳಿ ತಾಲೂಕಿನ ಹುಲಿಕಟ್ಟಿ ಗ್ರಾಮದ ಗೋಣೆಪ್ಪ ಎಂಬ ರೈತನ ಜಮೀನಿನ ತುಗ್ಗು ಪ್ರದೇಶದ ಮರದಲ್ಲಿ ನೈಲಾನ್ ಹಗ್ಗದಿಂದ ವ್ಯಕ್ತಿ ನೇಣು ಹಾಕಿಕೊಂಡಿದ್ದು, ಆತನ ದೇಹ ಸಂಪೂರ್ಣ ಕೊಳೆತು ಹೋಗಿದೆ. ತಲೆಯ ಬುರಡೆ ಮಾತ್ರ ಮರದಲ್ಲಿ ನೇತಾಡುತ್ತಿದ್ದು, ದೇಹ ನೆಲದ ಮೇಲೆ ಕೊಳೆತ ಸ್ಥಿತಿಯಲ್ಲಿ ಬಿದ್ದಿದೆ.
ಮೃತದೇಹದ ಮೇಲೆ ಹಸಿರು ಮತ್ತು ಬಿಳಿ ಮಿಶ್ರಿತ ಶರ್ಟ್, ನಶೆ ಬಣ್ಣದ ಬನಿಯನ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಇದೆ. 30ರಿಂದ 35 ವರ್ಷದ ಪುರುಷನ ಶವವಾಗಿರಬಹುದು ಎಂದು ಅಂದಾಜಿಸಲಾಗಿದೆ. ಸುಮಾರು 20ರಿಂದ 25 ದಿನಗಳ ಹಿಂದೆ ಈ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.