ಬಳ್ಳಾರಿ: ದ್ವಿತೀಯ ಪಿಯುಸಿ ಫೇಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ಜಿಲ್ಲೆಯ ಹೊಸಪೇಟೆ ನಗರದ ಅನಂತಶಯನ ಗುಡಿ ಬಳಿ ನಗರದ ಕೆ.ಎಸ್.ಪಿ.ಎನ್. ಕಾಲೇಜಿನ ಶ್ರೇಯಾ (18) ಮೃತ ವಿದ್ಯಾರ್ಥಿನಿ. ಇಂದು ದ್ವಿತೀಯ ಪಿಯುಸಿ ಫಲಿತಾಂಶ ನೋಡಲು ಕಾಲೇಜಿಗೆ ತೆರಳಿದ್ದರು. ರಿಸಲ್ಟ್ ಫೇಲ್ ಆಗಿದ್ದಕ್ಕೆ ಚಲಿಸುತ್ತಿದ್ದ ರೈಲಿನಡಿ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ಆಕೆಯೊಂದಿಗಿದ್ದ ಗೆಳತಿ ತಡೆಯುವ ಪ್ರಯತ್ನ ಮಾಡಿದ್ದಳು. ಆದರೆ ರೈಲ್ವೇ ಹಳಿಗೆ ಬಿದ್ದ ಪರಿಣಾಮ ಶ್ರೇಯಾ ತಲೆಗೆ ಗಂಭೀರವಾಗಿ ಗಾಯವಾಗಿತ್ತು. ಗೆಳತಿಯ ಕೈಗೂ ಪೆಟ್ಟಾಗಿತ್ತು.