ಬಳ್ಳಾರಿ: ಸಂವಿಧಾನ ವಿರೋಧಿ ಬಿಜೆಪಿ ಸರ್ಕಾರವನ್ನು ಸೋಲಿಸಬೇಕು ಮತ್ತು ವಿ.ಎಸ್ ಉಗ್ರಪ್ಪಗೆ ಮತ ನೀಡಿ ಗೆಲ್ಲಿಸಬೇಕು ಎಂದು ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಎ.ಮಾನಯ್ಯ ಹೇಳಿದರು.
ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಉಗ್ರಪ್ಪರನ್ನು ಗೆಲ್ಲಿಸಬೇಕು: ಎ.ಮಾನಯ್ಯ
ಸಂವಿಧಾನ ವಿರೋಧಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಸಬೇಕೆಂದು ರಾಜ್ಯ ಸಂಘಟನಾ ಸಂಚಾಲಕ ಎ.ಮಾನಯ್ಯ ಹೇಳಿದರು.
manappa
ನಗರದಲ್ಲಿ ಮಾತನಾಡಿದ ಅವರು ಕೇಂದ್ರದಲ್ಲಿ ಕೋಮುವಾದಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದ್ದು, ಬಿಜೆಪಿ ಸೋಲಿಬೇಕು ಮತ್ತು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕೆಂದರು. ವಿ. ಎಸ್ ಉಗ್ರಪ್ಪ 40 ವರ್ಷಗಳಿಂದ ರಾಜಕೀಯದಲ್ಲಿದ್ದಾರೆ. ಜಿಲ್ಲೆಯ ಅಭಿವೃದ್ಧಿಗಾಗಿ ಕೆಲಸ ಮಾಡತ್ತಾರೆ ಹಾಗೇ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಾರೆ. ಇಲ್ಲಿಯ ವಿಚಾರಗಳನ್ನು ಮಂಡಿಸುತ್ತಾರೆ ಅದಕ್ಕೆ ಅವರಿಗೆ ಮತಹಾಕಬೇಕೆಂದರು.
ಉಗ್ರಪ್ಪ ಸಂಸದರಾಗಲು ಯೋಗ್ಯ ,ದಲಿತರೆಲ್ಲರು ವಿ.ಎಸ್ ಉಗ್ರಪ್ಪ ಅವರಿಗೆ ಮತ ನೀಡಬೇಕೆಂದು ಮನವಿ ಮಾಡಿದರು.