ಬಳ್ಳಾರಿ: ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರನ್ನ ಶೀಘ್ರವೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ನೂರಾರು ಅಭಿಮಾನಿಗಳು ಜಿಲ್ಲೆಯ ಕುರುಗೋಡು ಪಟ್ಟಣದಲ್ಲಿ ಇಂದು ಬೀದಿಗಿಳಿದು ಹೋರಾಟ ಮಾಡಿದರು.
ಶಾಸಕ ಗಣೇಶ್ ಬಿಡುಗಡೆಗೆ ಆಗ್ರಹಿಸಿ ಬೀದಿಗಿಳಿದ ಅಭಿಮಾನಿಗಳು - etv bharat
ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಅವರ ನೂರಾರು ಅಭಿಮಾನಿಗಳು ಬೀದಿಗಿಳಿದರು.
ಪಟ್ಟಣದ ನಾಡಗೌಡರ ವೃತ್ತದ ಬಳಿ ನೂರಾರು ಕಾರ್ಯಕರ್ತರು ಜಮಾಯಿಸಿ ಎಐಸಿಸಿ ಅಧಿನಾಯಕ ರಾಹುಲ್ ಗಾಂಧಿ, ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ, ಮಾಜಿ ಶಾಸಕ ಎನ್.ಸೂರ್ಯ ನಾರಾಯಣರೆಡ್ಡಿ ಪರವಾಗಿ ಘೋಷಣೆ ಕೂಗಿದರು.
ಶಾಸಕ ಗಣೇಶ್ ಅವರನ್ನು ಕೂಡಲೇ ಜಾಮೀನು ಮೇಲೆ ಹೊರತರಬೇಕು. ಲೋಕಸಭಾ ಚುನಾವಣೆ ಇರುವುದರಿಂದ ಕ್ಷೇತ್ರದ ಮತದಾರರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಸಚಿವ ಡಿ.ಕೆ.ಶಿವಕುಮಾರ ಅವರು ವಿಶೇಷ ಕಾಳಜಿ ವಹಿಸಿ ಶಾಸಕರನ್ನ ಜಾಮೀನಿನ ಮೇಲೆ ಬಿಡಿಸಬೇಕು. ಕಂಪ್ಲಿಯ ಸರ್ವಾಂಗೀಣ ಅಭಿವೃದ್ಧಿಗೆ ಅವರು ಅವಿರತವಾಗಿ ಶ್ರಮಿಸಿದ್ದಾರೆ. ಅಲ್ಲದೇ, ರಾಜ್ಯದ ಮೈತ್ರಿಕೂಟ ಸರ್ಕಾರವು ಕಂಪ್ಲಿ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಅಧ್ಯಕ್ಷ ಗಾದಿಲಿಂಗಪ್ಪ ಹೇಳಿದರು.