ಬಳ್ಳಾರಿ:ರಾಜ್ಯದಲ್ಲಿ ಸಂಭವಿಸಿದ ನೆರೆ ಹಾವಳಿಗೆ ಕೇಂದ್ರದಿಂದ ಪರಿಹಾರ ಹಣಬಾರದಿರುವುದನ್ನು ಖಂಡಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸೆಪ್ಟಂಬರ್ 5ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಹುಜನ ಸಮಾಜವಾದಿ ಪಕ್ಷ ಮುಖಂಡ ಮಲ್ಲಯ್ಯ ಹೆಗಡೆ ತಿಳಿಸಿದ್ದಾರೆ.
ನಾಳೆ ನೆರೆ ಪರಿಹಾರ ನೀಡದ ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ..
ಕೇಂದ್ರ ಸರ್ಕಾರದಿಂದ ರಾಜ್ಯದಲ್ಲಿ ಸಂಭವಿಸಿದ ನೆರೆ ಹಾವಳಿಗೆ ಪರಿಹಾರ ಬಿಡುಗಡೆಯಾಗದಿರುವುದು ಹಾಗೂ ರಾಜ್ಯದ 25 ಸಂಸದರ ಬೇಜವಾಬ್ದಾರಿಯನ್ನು ಖಂಡಿಸಿ ಸೆಪ್ಟಂಬರ್ 5ರಂದು ಬಹುಜನ ಸಮಾಜವಾದಿ ಪಕ್ಷ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.
ಬಹುಜನ ಸಮಾಜವಾದಿ ಪಕ್ಷದಿಂದ ಪತ್ರಿಕಾಗೋಷ್ಠಿ
ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಪರಿಹಾರದ ಹಣವನ್ನು ಹೆಚ್ಚಿಸಬೇಕು. ಕೂಡಲೇ ಕೇಂದ್ರದಿಂದ ಪರಿಹಾರ ಹಣ ಬಿಡುಗಡೆ ಮಾಡಬೇಕು ಎಂದು ನಗರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.ಮುಂಬರುವ ಉಪಚುನಾವಣೆಯಲ್ಲಿ ವಿಜಯನಗರ ಕ್ಷೇತ್ರಕ್ಕೆ ಬಹುಜನ ಸಮಾಜ ಪಕ್ಷವು ಸ್ಪರ್ಧೆ ನಡೆಸಲಿದೆ ಎಂದು ಹೇಳಿದರು. ಮಹ್ಮದ್ ಭಾಷಾ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಲ್ಲಯ್ಯ ಹೆಗಡೆ, ಹೊಸಪೇಟೆ ಪ್ರಧಾನ ಕಾರ್ಯದರ್ಶಿ ಬಂಬಣ್ಣ, ಜಿಲ್ಲಾಧ್ಯಕ್ಷ ಈರಣ್ಣ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಪ್ಪ, ನೂರ ಮಹ್ಮದ್ ಹಾಜರಿದ್ದರು.