ಕರ್ನಾಟಕ

karnataka

ETV Bharat / state

ಬಳ್ಳಾರಿ: 7 ಬಾಲ್ಯ ವಿವಾಹಗಳಿಗೆ ಬ್ರೇಕ್ ಹಾಕಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

ಬಳ್ಳಾರಿಯಲ್ಲಿ ನಡೆಯಬೇಕಿದ್ದ ಅಂದಾಜು 7 ಬಾಲ್ಯ ವಿವಾಹಗಳನ್ನು ಪತ್ತೆ ಹಚ್ಚಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ತಂಡ ವಿವಾಹವನ್ನು ತಡೆ ಯುವಲ್ಲಿ ಯಶಸ್ವಿಯಾಗಿದ್ದಾರೆ.

Department of Women and Child Welfare
ಬಾಲ್ಯ ವಿವಾಹಕ್ಕೆ ಬ್ರೇಕ್

By

Published : May 10, 2020, 9:16 AM IST

ಬಳ್ಳಾರಿ: ತಾಲೂಕಿನಲ್ಲಿ ಒಂದೇ ದಿನ ನಡಿಯಬೇಕಿದ್ದ ಅಂದಾಜು 7 ಬಾಲ್ಯ ವಿವಾಹಗಳನ್ನು ಪತ್ತೆ ಹಚ್ಚಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ತಂಡ ವಿವಾಹವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ತಾಲೂಕಿನ ಕುಂಟನಾಳು ಗ್ರಾಮದಲ್ಲಿ ಮೇ 10 -13 ರಂದು ಪ್ರತ್ಯೇಕವಾಗಿ 7 ಬಾಲ್ಯವಿವಾಹಗಳನ್ನು ನಿಶ್ಚಯ ಮಾಡಲಾಗಿತ್ತು. ಆ ಕುರಿತು ಮಾಹಿತಿ ಪಡೆದ ಅಧಿಕಾರಿಗಳು ಕೂಡಲೇ ಆ ಗ್ರಾಮಕ್ಕೆ ತೆರಳಿ ಬಾಲ್ಯ ವಿವಾಹಗಳನ್ನು ತಡೆದಿದ್ದಾರೆ. 18 ವರ್ಷ ವಯೋಮಾನದ ಇಬ್ಬರು, 16 ವರ್ಷ ವಯೋಮಾನದ ನಾಲ್ವರು ಹಾಗೂ 14 ವರ್ಷ ವಯೋ ಮಾನದ ಒಬ್ಬ ಬಾಲಕಿಯನ್ನು ಅಧಿಕಾರಿಗಳ ತಂಡ ರಕ್ಷಣೆ ಮಾಡಿ ಜಿಲ್ಲೆಯ ಶಾಂತಿ ಧಾಮದಲ್ಲಿರಿಸಿದ್ದಾರೆ.

ಜಿಲ್ಲೆಯ ಕುರುಗೋಡು ತಾಲೂಕಿನ ಲಕ್ಷ್ಮಿಪುರದಲ್ಲಿ ಮೇ 11ರಂದು ನಡೆಬೇಕಿದ್ದ ಈ ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ವಧು- ವರರರ ಪೋಷಕರಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ.ಆರ್.ನಾಗರಾಜ ತಿಳಿಸಿದ್ದಾರೆ.

ಇನ್ನು ಮಹಿಳಾ ಮತ್ತು ಮಕ್ಕಳ ಇಲಾಖೆ, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಈ ದಾಳಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ABOUT THE AUTHOR

...view details