ಹೊಸಪೇಟೆ:ಕಂಪ್ಲಿಯ ಸಕ್ಕರೆ ಕಾರ್ಖಾನೆಯ ಆಂಜನೇಯ ದೇವಸ್ಥಾನ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ - ಕಂಪ್ಲಿ
ಬಳ್ಳಾರಿ ಜಿಲ್ಲೆಯ ಕಂಪ್ಲಿಯ ಸಕ್ಕರೆ ಕಾರ್ಖಾನೆಯ ಆಂಜನೇಯ ದೇವಸ್ಥಾನದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗಾಂಜಾ
ಚಿದಾನಂದ ಬಂಧಿತ ವ್ಯಕ್ತಿ. ಆತನಿಂದ 4,800ರೂ.ಗಳ ಮೌಲ್ಯದ 950ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪಿಎಸ್‍ಐ ಮೌನೇಶ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ತಂಡದಲ್ಲಿ ಎಎಸ್‍ಐ ತ್ಯಾಗರಾಜ್, ಮುಖ್ಯಪೇದೆಗಳಾದ ಅನ್ವರ್ ಸಾಬ್ ಇನ್ನಿತರರಿದ್ದರು.