ಕರ್ನಾಟಕ

karnataka

ETV Bharat / state

ಅತಿಥಿ ಉಪನ್ಯಾಸಕರಿಗೆ ಆಹಾರ ಕಿಟ್ ವಿತರಿಸಿದ ನೇಮಿರಾಜ್ ನಾಯ್ಕ

ಅತಿಥಿ ಯಪನ್ಯಾಸಕರು ಕೊರೊನಾ ಕಾರಣದಿಂದ ಕಾಲೇಜುಗಳು ನಡೆಯದೇ ಇರುವುದರಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು..

Distribution of food kit to guest lecturers
ಅತಿಥಿ ಉಪನ್ಯಾಸಕರಿಗೆ ಆಹಾರ ಕಿಟ್ ವಿತರಿಸಿದ ನೇಮಿರಾಜ್ ನಾಯ್ಕ

By

Published : Sep 23, 2020, 7:36 PM IST

ಬಳ್ಳಾರಿ: ರಾಜ್ಯದ ಎಲ್ಲಾ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕೊಡಿಸಲು ಗುರುವಾರ ಬಳ್ಳಾರಿ ಜಿಲ್ಲೆಯ ಅತಿಥಿ ಉಪನ್ಯಾಸಕರ ನಿಯೋಗ ಕರೆದುಕೊಂಡು ಹೋಗಿ ಉಪಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಾ.ಅಶ್ವತ್ಥ್ ನಾರಾಯಣ ಅವರನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಮಾಜಿ ಶಾಸಕ ಕೆ.ನೇಮಿರಾಜ್ ನಾಯ್ಕ್ ಹೇಳಿದರು.

ಅತಿಥಿ ಉಪನ್ಯಾಸಕರಿಗೆ ಆಹಾರ ಕಿಟ್ ವಿತರಿಸಿದ ನೇಮಿರಾಜ್ ನಾಯ್ಕ

ತಮ್ಮ ನಿವಾಸದಲ್ಲಿ ಕ್ಷೇತ್ರದ ಪ್ರಥಮದರ್ಜೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಯಪನ್ಯಾಸಕರು ಕೊರೊನಾ ಕಾರಣದಿಂದ ಕಾಲೇಜುಗಳು ನಡೆಯದೇ ಇರುವುದರಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಆಹಾರ ಕಿಟ್ ವಿತರಣೆ ಮಾಡಿ ನಂತರ ಮಾಧ್ಯಮದವರ ಜೊತೆ ಮಾತನಾಡಿದರು.

ಬಳ್ಳಾರಿ ಜಿಲ್ಲೆಯಲ್ಲಿನ ಸ.ಪದವಿಪೂರ್ವ ಕಾಲೇಜು ಹಾಗೂ ಪ್ರಥಮದರ್ಜೆ ಕಾಲೇಜುಗಳಲ್ಲಿ ಸುಮಾರು 500ಕ್ಕೂ ಹೆಚ್ಚು ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಬಳ್ಳಾರಿ ಖನಿಜ ನಿಧಿಯಿಂದ ಆರ್ಥಿಕ ಸಹಾಯ ಒದಗಿಸಲು ಜಿಲ್ಲಾ ಉಸ್ತುವಾರಿ ಸಚಿವರೂ ಅಪಾರ ಶಿಕ್ಷಣ ಕಾಳಜಿಯುಳ್ಳ ಆನಂದ್ ಸಿಂಗ್ ಅವರ ಜೊತೆ ಮಾತನಾಡಿ ಮನವರಿಕೆ ಮಾಡಿ ಕೊಡಲಾಗುವುದು. ಮಾನ್ಯ ಆನಂದ್ ಸಿಂಗ್ ಅವರು ಕಷ್ಟದಲ್ಲಿರುವ ಉಪನ್ಯಾಸಕರಿಗೆ ಖಂಡಿತ ಸಹಾಯ ಮಾಡುತ್ತಾರೆ ಎಂಬ ಭರವಸೆ ನನಗಿದೆ ಎಂದರು.

ಈ ಸಂದರ್ಭದಲ್ಲಿ ಹಗರಿಬೊಮ್ಮನಹಳ್ಳಿ ಕ್ಷೇತ್ರವ್ಯಾಪ್ತಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಪಾಲ್ಗೊಂಡಿದ್ದರು.

ABOUT THE AUTHOR

...view details