ಬಳ್ಳಾರಿ:ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆಯುಷ್ ಇಲಾಖೆ ಬಳ್ಳಾರಿ ನೇತೃತ್ವದಲ್ಲಿ ಕೊರೊನಾ ವೈರಸ್ ತಡೆಗಟ್ಟುವಲ್ಲಿ ಹೋಮಿಯೋಪತಿ ಔಷಧಗಳ ಪಾತ್ರ ಮಹತ್ವದ್ದಾಗಿರುವ ಹಿನ್ನೆಲೆಯಲ್ಲಿ, ಮಾಧ್ಯಮದ ಪ್ರತಿನಿಧಿಗಳಿಗೆ ಉಚಿತ ಮಾತ್ರೆಗಳ ವಿತರಣೆ ಕಾರ್ಯಕ್ರಮ ನಡೆಯಿತು.
ನಗರದ ಪತ್ರಿಕಾ ಭವನದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಹರಗಿನದೋಣಿಯ ಆಯುಷ್ ವೈದ್ಯಾಧಿಕಾರಿ ಡಾ. ಶಶಿಧರ್ ರಾಮದುರ್ಗ ಮಾತನಾಡಿ, ಜಿಲ್ಲಾ ಆಯುಷ್ ಇಲಾಖೆಯಿಂದ ಕೊರೊನಾ ವೈರಸ್ ತಡೆಗಟ್ಟುವಲ್ಲಿ ಹೋಮಿಯೋಪತಿ ಔಷಧಗಳ ಪಾತ್ರ ಮತ್ತು ಮಾಧ್ಯಮದ ಪ್ರತಿನಿಧಿಗಳಿಗೆ ಉಚಿತ ಮಾತ್ರೆಗಳ ವಿತರಣೆ ಮಾಡಿದ್ದೇವೆ. ಈ ಹಿಂದೆ ಜಿಲ್ಲಾ ಆಸ್ಪತ್ರೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಗೇ ಕಂದಾಯ ಇಲಾಖೆಗೆ ಉಚಿತವಾಗಿ ವಿತರಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರಿಗೆ ಉಚಿತವಾಗಿ ವಿತರಣೆ ಮಾಡುತ್ತೇವೆ ಎಂದು ತಿಳಿಸಿದರು.