ಕರ್ನಾಟಕ

karnataka

ETV Bharat / state

ಸಮಗ್ರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಜಿಲ್ಲಾಧಿಕಾರಿ ನಕುಲ್ ಚಾಲನೆ..

ಸಮಗ್ರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2020 ಕಾರ್ಯಕ್ರಮಕ್ಕೆ ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ನಕುಲ್ ವಿಧ್ಯುಕ್ತವಾಗಿ ಚಾಲನೆ ನೀಡಿದ್ರು.

ಸಮಗ್ರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸದ್ಭಳಕೆಗೆ ಜಿಲ್ಲಾಧಿಕಾರಿ ನಕುಲ್ ಸಲಹೆ

By

Published : Sep 2, 2019, 6:57 PM IST

ಬಳ್ಳಾರಿ:ಸಮಗ್ರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2020 ಕಾರ್ಯಕ್ರಮಕ್ಕೆ ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಡಿಸಿ ನಕುಲ್ ಅವರು ವಿಧ್ಯುಕ್ತವಾಗಿ ಚಾಲನೆ ನೀಡಿದರು.

ಈ ವೇಳೆಯಲ್ಲಿ ಅವರು ಮಾತನಾಡಿ, ಈ ಕಾರ್ಯಕ್ರಮವು ಸೆಪ್ಟೆಂಬರ್ 1ರಿಂದ ಆರಂಭವಾಗಲಿದೆ. ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ತಮ್ಮ ಹೆಸರುಗಳ ಸೇರ್ಪಡೆ, ತೆಗೆದು ಹಾಕುವಿಕೆ, ಪರಿಶೀಲನೆ ಮತ್ತು ಧೃಡೀಕರಣ ಹಾಗೂ ಮತದಾರರ ಪಟ್ಟಿಯಲ್ಲಿ ತಿದ್ದುಪಡಿ ಮಾಡಿಕೊಳ್ಳಬಹುದಾಗಿರುತ್ತದೆ ಎಂದು ತಿಳಿಸಿದರು.

ನಾಗರಿಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಚುನಾವಣಾ ಆಯೋಗದ ನೂತನ ಆ್ಯಂಡ್ರಾಯ್ಡ್ ಅಪ್ಲಿಕೇಷನ್ ವೋಟರ್ ಹೆಲ್ಪ್‌ಲೈನ್‌ನ ಡೌನ್‌ಲೋಡ್ ಮಾಡಿಕೊಂಡು ಪರಿಶೀಲಿಸಿ ಧೃಡೀಕರಿಸಿಕೊಳ್ಳಬಹುದು ಅಥವಾ ವೆಬ್‌ಸೈಟ್‌ನಲ್ಲೂ ಕೂಡ ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದ ಬಗ್ಗೆ ಯಾವುದೇ ಮಾಹಿತಿ ಬೇಕಿದ್ದಲ್ಲಿ "ಮತದಾರರ ಸಹಾಯವಾಣಿ-1950 ಟೋಲ್ ಫ್ರೀ ಸಂಖ್ಯೆಗೆ ಕರೆಮಾಡಿ ಸಂಪರ್ಕಿಸಬಹುದು ಅಥವಾ ಸ್ಥಳೀಯ ಮಹಾನಗರ ಪಾಲಿಕೆ ಆಯುಕ್ತರ ಕಚೇರಿ, ಸಹಾಯಕ ಆಯುಕ್ತರ ಕಚೇರಿ, ತಹಶೀಲ್ದಾರರ ಕಚೇರಿಗಳಿಗೆ ಭೇಟಿ ನೀಡಬಹುದು ಎಂದು ತಿಳಿಸಿದರು.

ABOUT THE AUTHOR

...view details