ಕರ್ನಾಟಕ

karnataka

ETV Bharat / state

ಆರ್ಥಿಕ ಸದೃಢರು ಬಿಪಿಎಲ್ ಕಾರ್ಡ್ ಹಿಂದಿರುಗಿಸಿ.. ಜಿಲ್ಲಾಧಿಕಾರಿ ಎಸ್‌ ಎಸ್ ನಕುಲ್ ಖಡಕ್ ಎಚ್ಚರಿಕೆ

ಆರ್ಥಿಕವಾಗಿ ಸದೃಢರು ಪಡೆದಿರುವ ಬಿಪಿಎಲ್ ಪಡಿತರ ಚೀಟಿಗಳ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳುವ ಮೊದಲು ಹಿಂದಿರುಗಿಸುವ ಬಗ್ಗೆ ಮತ್ತು ಕುಟುಂಬದ ಎಲ್ಲ ಸದಸ್ಯರ ಮಾಹಿತಿಯನ್ನೂ ನೀಡಬೇಕು ಎಂದು ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ಅವರು ಖಡಕ್​ ಸೂಚನೆ ನೀಡಿದ್ದಾರೆ.

ಎಸ್.ಎಸ್.ನಕುಲ್

By

Published : Sep 21, 2019, 2:15 PM IST

ಬಳ್ಳಾರಿ:ಆರ್ಥಿಕವಾಗಿ ದುರ್ಬಲರಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಸಹಾಯಧನಯುಕ್ತ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿರುವುದು ಗಮನಕ್ಕೆ ಬಂದಿದ್ದು, ಇನ್ಮೇಲೆ ಅದಕ್ಕೆ ಬ್ರೆಕ್ ಬೀಳಲಿದೆ.

ಆರ್ಥಿಕವಾಗಿ ಸದೃಢರು ಪಡೆದಿರುವ ಬಿಪಿಎಲ್ ಪಡಿತರ ಚೀಟಿಗಳ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳುವ ಮೊದಲು ಹಿಂದಿರುಗಿಸುವ ಬಗ್ಗೆ ಮತ್ತು ಕುಟುಂಬದ ಎಲ್ಲ ಸದಸ್ಯರ ಮಾಹಿತಿಯನ್ನೂ ನೀಡಬೇಕು ಎಂದು ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ಅವರು ಖಡಕ್​ ಸೂಚನೆ ನೀಡಿದ್ದಾರೆ.

ಬಿಪಿಎಲ್ ಕಾರ್ಡ್ ಪಡೆಯಲು ಇವರು ಅನರ್ಹ:
ಆದಾಯ ತೆರಿಗೆ ಪಾವತಿಸುತ್ತಿರುವ ಮತ್ತು 1000 ಚದರಡಿಗಿಂತ ದೊಡ್ಡದಾದ ಪಕ್ಕಾ ಮನೆ ಹೊಂದಿರುವ ಕುಟುಂಬಗಳು ಶಿಕ್ಷಣ, ಸಾರಿಗೆ, ವಿದ್ಯುತ್, ರೈಲ್ವೆ, ಪೊಲೀಸ್ ಮೊದಲಾದ ಇಲಾಖೆಗಳಲ್ಲಿ ಸರ್ಕಾರಿ ನೌಕರಿ ಮಾಡುತ್ತಿರುವ ಕೆಲವರು ತಮ್ಮ ಹೆಸರನ್ನು ಹೊರತುಪಡಿಸಿ ಕುಟುಂಬದ ಇತರರ ಹೆಸರಿನಲ್ಲಿ ಬಿಪಿಎಲ್ ಕಾರ್ಡ್​ ಪಡೆದ ಕುಟುಂಬಗಳು, ಸಹಕಾರ ಸಂಘಗಳ ಖಾಯಂ ನೌಕರರು, ಸ್ವಾಯುತ್ತ ಸಂಸ್ಥೆ, ಮಂಡಳಿಗಳ ನೌಕರರು, ಬ್ಯಾಂಕ್ ನೌಕರರು, ಆಸ್ಪತ್ರೆ ನೌಕರರು, ವಕೀಲರು, ಆಡಿಟರ್ಸ್‍ಗಳು, ದೊಡ್ಡ ಅಂಗಡಿ, ಹೋಟೆಲ್ ವರ್ತಕರು, ಸ್ವಂತ ಕಾರು, ಲಾರಿ, ಜೆಸಿಬಿ ಮೊದಲಾದ ವಾಹನ ಹೊಂದಿರುವವರು, ಅನುದಾನಿತ ಶಾಲಾ ಕಾಲೇಜು ನೌಕರರು, ಗುತ್ತಿಗೆದಾರರು, ಕಮೀಷನ್ ಏಜೆಂಟ್‍ಗಳು, ಮನೆ, ಮಳಿಗೆ ಕಟ್ಟಡಗಳನ್ನು ಬಾಡಿಗೆಗೆ ನೀಡಿ ವರಮಾನ ಪಡೆಯುತ್ತಿರುವ ಕುಟುಂಬಸ್ಥರು ಸರ್ಕಾರದ ಬಿಪಿಎಲ್ ಪಡಿತರ ಚೀಟಿ ಪಡೆಯಲು 1 ಲಕ್ಷ 20 ಸಾವಿರರೊಳಗೆ ಕುಟುಂಬದ ಆದಾಯ ನಿಗಧಿಪಡಿಸಲಾಗಿದ್ದು, ಈ ಆದಾಯವನ್ನು ಮೀರಿದ ಕುಟುಂಬಗಳು ಈ ಸೌಲಭ್ಯ ಪಡೆಯಲು ಅನರ್ಹರಾಗಿರುತ್ತಾರೆ.

ಬಿಪಿಎಲ್ ಕಾರ್ಡ್ ವಾಪಸ್ ನೀಡಿ:
ಸರ್ಕಾರವು ಸಹಾಯಧನ ನೀಡಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ನೀಡುತ್ತಿರುವ ಈ ಯೋಜನೆಯ ಲಾಭವನ್ನು ಕೆಲವು ಸದೃಢರು ಸುಳ್ಳು ಮಾಹಿತಿ ನೀಡಿ, ಕಬಳಿಸಿರುವುದು ವಿಷಾದನೀಯ ಸಂಗತಿ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವ ಅನರ್ಹರು 2019ನೇ ಸೆಪ್ಟೆಂಬರ್ 30ರೊಳಗಾಗಿ ಕೂಡಲೇ ಸಹಾಯಕ ನಿರ್ದೇಶಕರು ಪಡಿತರ ಪ್ರದೇಶ ಬಳ್ಳಾರಿ ಅಥವಾ ಸಂಬಂಧಪಟ್ಟ ತಾಲೂಕು ಕಚೇರಿಗೆ ಹಿಂದಿರುಗಿಸಬೇಕು.

ಕ್ರಿಮಿನಲ್ ಮೊಕದ್ದಮೆ:
ತಪ್ಪು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವ ಅನರ್ಹರು ಪಡಿತರ ಚೀಟಿಯನ್ನು ಹಿಂದಿರುಗಿಸಬೇಕು. ಇಲ್ಲವಾದಲ್ಲಿ ಅಂತಹ ಅನರ್ಹರನ್ನು ಸರ್ಕಾರವೇ ಪತ್ತೆ ಮಾಡಿ ಯಾವಾಗಿನಿಂದ ಎಷ್ಟು ಪಡಿತರ ಪಡೆದಿದ್ದಾರೆ ಎಂಬುವುದನ್ನು ಲೆಕ್ಕ ಮಾಡಿ ಮಾರುಕಟ್ಟೆ ದರದಲ್ಲಿ ದಂಡ ವಸೂಲಿ ಮಾಡುವುದರ ಜೊತೆಗೆ ಅಂತಹವರ ವಿರುದ್ಧ ಅಧಿನಿಯಮ 1977ರನ್ವಯ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸಿ:
ಸರ್ಕಾರದ ಸುತ್ತೋಲೆ ದಿನಾಂಕ:16-5-2019 ರನ್ವಯ ಆಹಾರ ಸುರಕ್ಷತಾ ಮಾಹೆಯನ್ನು ಜಾರಿಗೊಳಿಸುವ ಉದ್ದೇಶದಿಂದ ಈಗಾಗಲೇ ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ)ವನ್ನು ಮಾಡಲು ಉಚಿತವಾಗಿ ಸರ್ಕಾರ ಅವಕಾಶ ಕಲ್ಪಿಸಿಕೊಡಲಾಗಿದೆ. ಆಧಾರ್ ದೃಢೀಕರಣ(ಇ-ಕೆವೈಸಿ)ವನ್ನು 2019ರ ಸೆ.11 ರಿಂದ 2019 ನವೆಂಬರ್ ಮಾಹೆಯವರೆಗೆ 3 ತಿಂಗಳವರೆಗೆ ಅವಕಾಶ ಕಲ್ಪಿಸಿದ್ದು, ಡಿಸೆಂಬರ್-2019ರ ಮಾಹೆಯಿಂದ ಆಧಾರ್ ದೃಢೀಕರಣ(ಇ-ಕೆವೈಸಿ)ವನ್ನು ಮಾಡದೇ ಇರುವ ಫಲಾನುಭವಿಗಳ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಹಾಗೂ ನಂತರದ ದಿನಗಳಲ್ಲಿ ಆಧಾರ್ ದೃಢೀಕರಣ(ಇ-ಕೆವೈಸಿ)ವನ್ನು ಮಾಡಿದಲ್ಲಿ ಮಾತ್ರ ಅಂತಹ ಫಲಾನುಭವಿಗಳಿಗೆ ನಂತರದ ತಿಂಗಳಿನಿಂದ ಪಡಿತರ ಚೀಟಿ ವಿತರಿಸಲು ಕ್ರಮವಹಿಸಲಾಗುವುದು.

ಆದ್ದರಿಂದ ಎಲ್ಲಾ ಪಡಿತರ ಚೀಟಿ ಹೊಂದಿರುವ ಕುಟುಂಬದ ಸದಸ್ಯರು ಆಧಾರ್ ದೃಢೀಕರಣ (ಇ-ಕೆವೈಸಿ)ವನ್ನು ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ABOUT THE AUTHOR

...view details