ಬಳ್ಳಾರಿ:ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೊರೊನಾ ವೈರಸ್ ಸಂಭಂದಿಸಿದಂತೆ ಎನ್.ಜಿ.ಒ ಮತ್ತು ಸಂಘ ಸಂಸ್ಥೆಗಳೊಂದಿಗೆ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಿಂದ ಹೊರದೇಶಗಳಿಗೆ ಹೋಗಿ ಬಂದಿದ್ದರೆ ತಕ್ಷಣ ಮಾಹಿತಿ ನೀಡಿ ಚಿಕಿತ್ಸೆ ಹಾಗೂ ತಪಾಸಣೆಗೆ ಮಾಡಿಸಿಕೊಂಡು ಕೊರೊನಾ ವೈರಸ್ ತಡೆಗಟ್ಟಲು ಸಹಕರಿಸಬೇಕು. ನಡೆಯುತ್ತದೆ ಬಿಡಿ.. ಎಂದು ಬೇಜವಾಬ್ದಾರಿಯಿಂದ ನಡೆದುಕೊಂಡು ಎಲ್ಲೆಂದರಲ್ಲಿ ಸಂಚರಿಸಿದ್ದು ಕಂಡುಬಂದಲ್ಲಿ ಬೇರೆಯವರಿಗೆ ಇದರಿಂದ ಸಮಸ್ಯೆಯಾಗುತ್ತದೆ ಎಂಬುದನ್ನು ಅರಿತುಕೊಳ್ಳಬೇಕು. ಸಾಮಾಜಿಕ ಹೊಣೆಗಾರಿಕೆ ಮರೆತು ಆ ರೀತಿ ವರ್ತಿಸಿದರೆ ಅಂತವರ ಮೇಲೆ ಜಿಲ್ಲಾಡಳಿತ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂಬುದನ್ನು ಮರೆಯದಿರಿ ಎಂದರು.
ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ. ಮದುವೆ, ಸಭೆ-ಸಮಾರಂಭಗಳಲ್ಲಿ ಅತ್ಯಂತ ಕಡಿಮೆ ಜನರನ್ನು ಸೇರಿಸುವ ನಿಟ್ಟಿನಲ್ಲಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಗಿದೆ. ಜಾತ್ರೆಗಳನ್ನು ರದ್ದು ಪಡಿಸಲಾಗಿದೆ. ಕೊರೊನಾ ವೈರಸ್ ಜಿಲ್ಲೆಯಲ್ಲಿ ವ್ಯಾಪಿಸದಂತೆ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಜಿಲ್ಲಾಡಳಿತ ಈಗಾಗಲೇ ಕೈಗೊಂಡಿದೆ ಎಂದು ತಿಳಿಸಿದರು.