ಕರ್ನಾಟಕ

karnataka

ETV Bharat / state

ಕೋವಿಡ್ ರೂಪಾಂತರ ಬಗ್ಗೆ ಭಯ ಬೇಡ, ಮುಂಜಾಗ್ರತೆ ವಹಿಸಿ : ಸಚಿವ ಆನಂದಸಿಂಗ್

ಕೋವಿಡ್ ರೂಪಾಂತರ ವಿಚಾರ ಸಂಬಂಧಿಸಿದಂತೆ ‌ಜನರು ಭಯಭೀತರಾಗುವುದು ಬೇಡ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಹೇಳಿದರು.

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್
ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್

By

Published : Dec 23, 2020, 2:27 PM IST

ಬಳ್ಳಾರಿ: ಕೋವಿಡ್ ರೂಪಾಂತರ ವಿಚಾರ ಸಂಬಂಧಿಸಿದಂತೆ ‌ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ. ಸ್ಯಾನಿಟೈಸರ್, ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಪಾಲನೆ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಹೇಳಿದರು.

ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಸ್ಥಿತಿಗತಿ ಹಾಗೂ ರೂಪಾಂತರ ಕುರಿತು ಚರ್ಚೆ ಮಾಡುವ ಸಲುವಾಗಿ ಬಂದಿದ್ದೇನೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಗೈಡ್ ಲೈನ್ಸ್ ಅನುಸಾರ ಕ್ರಮ ವಹಿಸಲಾಗುವುದು ಎಂದರು.

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್

ಹಳೆಯ ವಿಮ್ಸ್ ಅಪರೇಷನ್ ಥಿಯೇಟರ್ ಕೆಡವಿ ಡಿಎಂಎಫ್‌ ಅಡಿ 7ಕೋಟಿ ರೂ. ಒದಗಿಸಿ ಕಾಮಗಾರಿ ಆರಂಭಿಸಲಾಗುವುದು ಎಂದರು. ಬಳ್ಳಾರಿ ವಿಭಜನೆ ವಿರುದ್ಧದ ಹೋರಾಟಗಾರರೊಂದಿಗೆ ಚರ್ಚಿಸಲಾಗುವುದು ಮತ್ತು ಅವರ ಅಹವಾಲುಗಳನ್ನು ಆಲಿಸಲಾಗುವುದು ಎಂದು ತಿಳಿಸಿದರು.

ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ಬೈಕ್ ಱಲಿ:ಬಳ್ಳಾರಿ ಜಿಲ್ಲೆ ವಿಭಜನೆ ಖಂಡಿಸಿ, ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ‌ಇಂದು ನಗರದ ಈಡಿಗ ಕಾಂಪ್ಲೆಕ್ಸ್​ನಿಂದ ರಾಯಲ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೈಕ್ ಱಲಿ ಮೂಲಕ ಪ್ರತಿಭಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯ ಪನ್ನರಾಜ್, ಎರಿಸ್ವಾಮಿ, ಬಿ.ಎಂ ಪಾಟೀಲ್ ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಭಾಗವಹಿಸಿದ್ದರು.

ABOUT THE AUTHOR

...view details