ಬಳ್ಳಾರಿ: ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಅವರಿಗೆ ಇರುಸು-ಮುರುಸು ಆಗಿದೆ. ಅವರನ್ನು ಪಕ್ಷಕ್ಕೆ ಆಹ್ವಾನಿಸಿ, ಹಿಂದುಳಿದ ವರ್ಗದವರನ್ನು ಒಂದು ಮಾಡಲು ಅಂದು ಮಾತನಾಡಿದ್ದೇನೆ. ನಾನು ಯಾವುದೇ ವೈಯಕ್ತಿಕ ಅರ್ಥ ಹಿಡಿದುಕೊಂಡು ಮಾತನಾಡಿಲ್ಲ. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಸಚಿವ ಬಿ.ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಪರವಾಗಿ ತಮ್ಮ ಹೇಳಿಕೆ ಕುರಿತಾಗಿ ಮಾತನಾಡಿ, ಡಿಕೆಶಿ ಹಾಗೂ ಇತರರಿಂದ ಕಾಂಗ್ರೆಸ್ನಲ್ಲಿ ಜಿದ್ದಾಜಿದ್ದಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರನ್ನು ಭಾರತೀಯ ಜನತಾ ಪಕ್ಷಕ್ಕೆ ಆಹ್ವಾನಿಸುವ ಬಗ್ಗೆ ಮಾತನಾಡಿದ್ದೇನೆ. ಈ ವಿಚಾರದಲ್ಲಿ ರಾಜ್ಯಾಧ್ಯಕ್ಷರಿಗೆ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ ಎಂದರು.
ಸಚಿವ ಶ್ರೀ ರಾಮುಲು ಮಾಧ್ಯಮದೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಧೀಮಂತ ನಾಯಕ, ಪಕ್ಷ ಮತ್ತು ಜನರಿಗಾಗಿ ಜೀವನ ಮುಡಿಪಾಗಿಟ್ಟಿದ್ದಾರೆ. ಮೊದಲಿನಿಂದಲೂ ಯಡಿಯೂರಪ್ಪ ಮತ್ತು ಈಶ್ವರಪ್ಪ ಪಕ್ಷವನ್ನು ಕಟ್ಟುವ ಕೆಲಸ ಮಾಡಿದ್ದಾರೆ. ನನಗೆ ಈ ಸ್ಥಾನ ಸಿಗಲು ಯಡಿಯೂರಪ್ಪನವರೇ ಕಾರಣ ಎಂದು ಸಚಿವರು ಅಭಿಪ್ರಾಯಪಟ್ಟರು.
ಯಡಿಯೂರಪ್ಪನವರಿಗೆ ಕೇಂದ್ರದಲ್ಲಿ ಪ್ರಮುಖ ಸ್ಥಾನ ಸಿಕ್ಕಿದ್ದರಿಂದ ಮುಂದಿನ ಚುನಾವಣೆಯಲ್ಲಿ ಪಕ್ಷ ಮತ್ತು ಕಾರ್ಯಕರ್ತರಿಗೆ ಆನೆಬಲ ಬಂದಂತಾಗಿದೆ. ಈ ಸ್ಥಾನದ ಪಡೆದವರಲ್ಲಿ ದಕ್ಷಿಣ ಭಾರತದಲ್ಲಿಯೇ ಪ್ರಥಮ. ಬಿಜೆಪಿಯನ್ನು ಎರಡು ಸ್ಥಾನದಿಂದ 120 ಸ್ಥಾನಕ್ಕೆ ತಂದಿದ್ದು, ಯಡಿಯೂರಪ್ಪನವರು. ಸಾಮೂಹಿಕ ನಾಯಕತ್ವದಲ್ಲಿ ಯಡಿಯೂರಪ್ಪ ಮತ್ತು ಬೊಮ್ಮಾಯಿ ಮಾರ್ಗದರ್ಶನದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಸಚಿವ ಶ್ರೀರಾಮುಲು ಹೇಳಿದರು.
ಇದನ್ನೂ ಓದಿ :ಹಿಂದುಳಿದ ಸಮುದಾಯದ ವಿಚಾರ ಬಂದಾಗ ನಾನು ಸಿದ್ದರಾಮಯ್ಯ ಒಂದೇ.. ಶ್ರೀರಾಮುಲು