ಬಳ್ಳಾರಿ :ಅಗತ್ಯ ವಸ್ತುಗಳ ಖರೀದಿಗೆ ಅತ್ಯಂತ ಅವಶ್ಯಕತೆ ಇದ್ದರೇ ಬೆಳಗ್ಗೆ 7 ರಿಂದ 11ರವರೆಗೆ ಮಾತ್ರ ಹೊರಬಂದು ಖರೀದಿಸಿ. ಇಲ್ಲದಿದ್ರೆ ಮನೆಯಲ್ಲಿಯೇ ಕ್ಷೇಮವಾಗಿರಿ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ಆದೇಶ ಹೊರಡಿಸಿದ್ದಾರೆ.
ಬಳ್ಳಾರಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ವೇಳಾಪಟ್ಟಿ ಮರು ನಿಗದಿ.. - corona effect in Karnataka
ಈ ಮುಂಚೆ ಸಂಜೆ 5 ರಿಂದ 7ರವರೆಗೆ ಖರೀದಿಗೆ ಅವಕಾಶ ನೀಡಲಾಗಿದ್ದ ಆದೇಶವನ್ನು ರದ್ದುಪಡಿಸಲಾಗಿದೆ. ಬೆಳಗ್ಗೆಯಷ್ಟೇ ಖರೀದಿ ಮಾಡಬೇಕು ಎಂದು ಆದೇಶ ಹೊರಡಿಸಿದ್ದಾರೆ.
ಈ ಮುಂಚೆ ಸಂಜೆ 5 ರಿಂದ 7ರವರೆಗೆ ಖರೀದಿಗೆ ಅವಕಾಶ ನೀಡಲಾಗಿದ್ದ ಆದೇಶವನ್ನು ರದ್ದುಪಡಿಸಲಾಗಿದೆ. ಬೆಳಗ್ಗೆಯಷ್ಟೇ ಖರೀದಿ ಮಾಡಬೇಕು ಎಂದು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಹೊಸಪೇಟೆಯಲ್ಲಿ ಎರಡು ದಿನಗಳ ಹಿಂದೆ ಮೂರು ಪಾಸಿಟಿವ್ ಪ್ರಕರಣ ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಈ ಸಮಯವನ್ನು ಮರುನಿಗದಿಪಡಿಸಲಾಗಿದೆ.
ಸರ್ಕಾರದ ಆದೇಶದಂತೆ ಅಗತ್ಯ ವಸ್ತುಗಳಾದ ತರಕಾರಿ, ಹಣ್ಣು, ದಿನಸಿ ವಸ್ತುಗಳು, ಮಾಂಸ, ಮೀನು ಇವುಗಳನ್ನು ಮರುನಿಗದಿಪಡಿಸಿದ ಸಮಯದಲ್ಲಿ ಮಾತ್ರ ಖರೀದಿ ಮತ್ತು ವ್ಯಾಪಾರ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಈ ಆದೇಶವು ಎ.2 ರಿಂದ ಜಾರಿಯಲ್ಲಿರುತ್ತದೆ. ವಾಹನಗಳಿಗೆ ನೀಡಲಾದ ವಿನಾಯಿತಿ ಪಾಸ್‌ಗಳೂ ಮುಂದುವರಿಯಲಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.