ಬಳ್ಳಾರಿ:ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಹಾಗೂ ಬಳ್ಳಾರಿ ರೆಡ್ಡಿ ಸಹೋದರರಾದ ಗಾಲಿ ಸೋಮಶೇಖರ ರೆಡ್ಡಿ, ಗಾಲಿ ಕರುಣಾಕರ ರೆಡ್ಡಿ ಅವರಿಗೆ ಯಾವುದೇ ಸಚಿವ ಸ್ಥಾನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀಡಬಾರದು ಎಂದು ಗಣಿ ಉದ್ಯಮಿ ಟಪಾಲ್ ಗಣೇಶ್ ಆಗ್ರಹಿಸಿದ್ದಾರೆ.
ರೆಡ್ಡಿ ಸಹೋದರರು, ಶ್ರೀರಾಮುಲುಗೆ ಸಚಿವ ಸ್ಥಾನ ನೀಡಬೇಡಿ: ಟಪಾಲ್ ಗಣೇಶ್ - ವಾಲ್ಮೀಕಿ ಸಮುದಾಯ
ಈ ಹಿಂದೆ ಬಿಎಸ್ವೈ ಅಧಿಕಾರಾವಧಿಯಲ್ಲಿ ಗಣಿ ಅಕ್ರಮದ ಮೂಲಕ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆ. ಅಂದಿನ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಗಾಲಿ ಜನಾರ್ದನ ರೆಡ್ಡಿ, ಕಂದಾಯ ಸಚಿವರಾಗಿದ್ದ ಗಾಲಿ ಕರುಣಾಕರ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದ ಬಿ.ಶ್ರೀರಾಮುಲು ಅವರು ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಗಣಿ ಉದ್ಯಮಿ ಟಪಾಲ್ ಗಣೇಶ್ ಆರೋಪಿಸಿದರು.
ಈ ಬಗ್ಗೆ ಫೇಸ್ಬುಕ್ನಲ್ಲಿ ವಿಡಿಯೋ ಮೂಲಕ ಮಾತನಾಡಿರುವ ಅವರು, ಈ ಹಿಂದೆ ಬಿಎಸ್ವೈ ಅಧಿಕಾರಾವಧಿಯಲ್ಲಿ ಗಣಿ ಅಕ್ರಮದ ಮೂಲಕ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆ. ಅಂದಿನ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಗಾಲಿ ಜನಾರ್ದನ ರೆಡ್ಡಿ, ಕಂದಾಯ ಸಚಿವರಾಗಿದ್ದ ಗಾಲಿ ಕರುಣಾಕರ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದ ಬಿ.ಶ್ರೀರಾಮುಲು ಅವರು ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಹೀಗಾಗಿ, ಈ ಸಚಿವ ಸಂಪುಟದಲ್ಲಿ ರೆಡ್ಡಿ ಸಹೋದರರು, ಅವರ ಆಪ್ತ ಬಿ.ಶ್ರೀರಾಮುಲು ಅವರಿಗೆ ಯಾವುದೇ ಸ್ಥಾನಮಾನ ನೀಡಬಾರದು ಎಂದು ಒತ್ತಾಯಿಸಿದ್ದಾರೆ.
ವಾಲ್ಮೀಕಿ ಸಮುದಾಯ ಕೋಟಾದಡಿ ಶಾಸಕ ಬಿ.ಶ್ರೀರಾಮುಲು ಅವರು ಉಪ ಮುಖ್ಯಮಂತ್ರಿಯಾಗುವ ಕನಸಿಗೆ ಈಗ ಅಡ್ಡಗಾಲು ಎದುರಾಗಿದೆ. ಶ್ರೀರಾಮುಲುಗೆ ಸಚಿವ ಸ್ಥಾನ ಅಥವಾ ಡಿಸಿಎಂ ಹುದ್ದೆ ನೀಡಿದರೆ ಅದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ನೀಡಿದಂತಾಗುತ್ತದೆ ಎಂಬ ದೂರುಗಳು ಸಾರ್ವಜನಿಕ ವಲಯದಲ್ಲಿ ದಟ್ಟವಾಗಿವೆ.