ಬಳ್ಳಾರಿ:ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಸ್ಥಳಗಳಲ್ಲಿ ಜಾಹೀರಾತುಗಳನ್ನು ಅಳವಡಿಸುವ ಪೂರ್ವದಲ್ಲಿ ಪಾಲಿಕೆ ವತಿಯಿಂದ ಕಡ್ಡಾಯವಾಗಿ ಪರವಾನಗಿ ಪಡೆದುಕೊಳ್ಳಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದ್ದಲ್ಲಿ ಜೈಲು ಶಿಕ್ಷೆ ಜೊತೆಗೆ ದಂಡ ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಎಚ್ಚರಿಕೆ ನೀಡಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ ಜಾಹೀರಾತು ಅಳವಡಿಸುವ ಮುನ್ನ ಪರವಾನಗಿ ಕಡ್ಡಾಯ: ಆಯುಕ್ತೆ ಪ್ರೀತಿ ಗೆಹ್ಲೋಟ್ - ಆಯುಕ್ತೆ ಪ್ರೀತಿ ಗೆಹ್ಲೋಟ್ ಆದೇಶ
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಸ್ಥಳಗಳಲ್ಲಿ ಜಾಹೀರಾತುಗಳನ್ನು ಅಳವಡಿಸುವ ಪೂರ್ವ, ಪಾಲಿಕೆಯಿಂದ ಪರವಾನಗಿ ಪಡೆದುಕೊಳ್ಳಬೇಕು. ಇಲ್ಲದಿದ್ದರೆ ಜೈಲು ಶಿಕ್ಷೆ ಜೊತೆಗೆ ದಂಡ ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಗರದ ವಿವಿಧ ಸ್ಥಳಗಳಲ್ಲಿ ಸಂಘ - ಸಂಸ್ಥೆಗಳ, ರಾಜಕೀಯ ಪಕ್ಷಗಳು, ಖಾಸಗಿ ವ್ಯಕ್ತಿಗಳು, ಧಾರ್ಮಿಕ ಸಂಸ್ಥೆಗಳು ಹಾಗೂ ಇತರ ಸಂಘಟನೆಗಳು ಫ್ಲೆಕ್ಸ್ಗಳು, ಬ್ಯಾನರ್ಗಳು ಹಾಗೂ ಧರ್ಮಕ್ಕೆ ಸಂಬಂಧಿಸಿದ ಬಾವುಟಗಳನ್ನು ಸರ್ಕಾರಿ ಅಥವಾ ಖಾಸಗಿ ಆಸ್ತಿಗಳ ಮೇಲೆ ಆಗಲಿ, ವಿದ್ಯುತ್ ಕಂಬಗಳು, ಮೀಡಿಯನ್ಸ್, ಡಿವೈಡರ್ಸ್, ರಸ್ತೆ ಬದಿಯ ಮರಗಳು ಹಾಗೂ ವೃತ್ತಗಳಲ್ಲಿ ಪರವಾನಗಿ ಇಲ್ಲದೇ ಜಾಹೀರಾತುಗಳನ್ನು ಅಂಟಿಸಬಾರದು ಎಂದು ವಿವರಿಸಿದ್ದಾರೆ.
ಪೂರ್ವ ಪರವಾನಗಿ ಪಡೆದವರು ಮಹಾನಗರಪಾಲಿಕೆ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಅಳವಡಿಸಬೇಕು. ಪರವಾನಗಿ ಪಡೆಯದೇ ಅಂಟಿಸಿದ್ದಲ್ಲಿ ಕಾಯ್ದೆ -1981ರ ಕಾಲಂ ನಂ.3ರ ಪ್ರಕಾರ ಪ್ರಕರಣ ದಾಖಲಿಸಿ, 6 ತಿಂಗಳು ಜೈಲು ಶಿಕ್ಷೆ ಅಥವಾ ರೂ.1000 ದಂಡ ಅಥವಾ ಈ ಎರಡು ದಂಡನೆಯನ್ನು ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.