ಬಳ್ಳಾರಿ:ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಉಜ್ಜಿನಿ ಗ್ರಾಮದಲ್ಲಿ ಬೆಳೆ ಸಮೀಕ್ಷೆಯ ಮೊಬೈಲ್ ಆ್ಯಪ್ ಜಾಗೃತಿ ವಾಹನಕ್ಕೆ ಹಸಿರು ಬಾವುಟ ತೋರಿಸುವ ಮೂಲಕ ಕೊಟ್ಟೂರು ತಹಶೀಲ್ದಾರ್ ಜಿ. ಅನಿಲ್ ಕುಮಾರ್ ಗುರುವಾರ ಚಾಲನೆ ನೀಡಿದರು.
ಪ್ರಸ್ತಕ 2020-21ನೇ ಸಾಲಿನಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳಗಳ ಬಗೆಗಿನ ಮಾಹಿತಿಯನ್ನು ಹಾಗೂ ಸರ್ವೇ ನಂಬರ್, ವಿಸ್ತೀರ್ಣ ಬೆಳಗಳ ಬಗ್ಗೆ ತಮ್ಮ ಮೊಬೈಲ್ ಆ್ಯಪ್ ಮೂಲಕ ದಾಖಲಿಸಬಹುದು ಎಂದು ತಹಶೀಲ್ದಾರ್ ಅನಿಲ್‌ಕುಮಾರ್ ತಿಳಿಸಿದರು.