ಬಳ್ಳಾರಿ:ಮಹಾಮಾರಿ ಕೊರೊನಾ ಎರಡನೇ ಅಲೆ ಹೆಚ್ಚಾಗಿದ್ದರೂ, ಬಳ್ಳಾರಿ ಮಹಾ ನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ - ಬಿಜೆಪಿ ಪಕ್ಷದ ನಾಯಕರು ಭರ್ಜರಿ ಪ್ರಚಾರ ನಡೆಸಿದ್ರು.
ಬಳ್ಳಾರಿಯ ಮಹಾನಗರದ ನಾನಾ ವಾರ್ಡ್ಗಳಲ್ಲಿ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹಾಗೂ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಅವರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಆದರೆ, ಕೋವಿಡ್ ನಿಯಮಗಳನ್ನೇ ಗಾಳಿಗೆ ತೂರಿದ್ದಾರೆ.
ಕೋವಿಡ್ ನಿಯಮ ಗಾಳಿಗೆ ತೂರಿ ಭರ್ಜರಿ ಪ್ರಚಾರ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಪ್ರಚಾರದ ವೇಳೆ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾದ ಸಚಿವ ಶ್ರೀರಾಮುಲು ಹಾಗೂ ಶಾಸಕ ಬಿ.ನಾಗೇಂದ್ರ ಅವರು ಅದ್ಧೂರಿಯಾಗಿ ಪ್ರಚಾರ ನಡೆಸಿದ್ದಾರೆ. ಇಷ್ಟಾದರೂ ಜಿಲ್ಲಾ ಚುನಾವಣಾ ಆಯೋಗ ಮಾತ್ರ ಕೈಕಟ್ಟಿ ಕುಳಿತಿದೆ.
ಈವರೆಗೂ ಕೂಡ ಯಾವುದೇ ಪ್ರಕರಣ ದಾಖಲಿಸಿಲ್ಲ. ಸಾಮಾನ್ಯ ಜನರು ಗುಂಪು ಸೇರಿದ್ರೆ ಸಾಕು, ಕೂಡಲೇ ಕೇಸ್ ದಾಖಲಿಸುವ ಜಿಲ್ಲಾಡಳಿತ ಇಷ್ಟೆಲ್ಲಾ ನಡೆದ್ರೂ ಮೂಕ ಪ್ರೇಕ್ಷಕನಂತೆಯೇ ವರ್ತಿಸುತ್ತಿರೋದು ಅತ್ಯಂತ ಶೋಚನೀಯ ಸಂಗತಿಯಾಗಿದೆ.