ಬಳ್ಳಾರಿ:ಮೈತ್ರಿ ಸರ್ಕಾರದ ಅವಧಿಯಲ್ಲಿ ಸ್ಪೀಕರ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಈ ತೀರ್ಪು ಅನರ್ಹ ಶಾಸಕರಿಗೆ ಹಾಗೂ ಬಿಜೆಪಿಗೆ ಕಪಾಳಮೋಕ್ಷವಾಗಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.
ಸುಪ್ರೀಂ ತೀರ್ಪಿನಿಂದ ಅನರ್ಹ ಶಾಸಕರಿಗೆ, ಬಿಜೆಪಿಗೆ ಕಪಾಳಮೋಕ್ಷ ಆಗಿದೆ: ಉಗ್ರಪ್ಪ - ವಿ.ಎಸ್.ಉಗ್ರಪ್ಪ
ಸುಪ್ರೀಂಕೋರ್ಟ್ ಅನರ್ಹ ಶಾಸಕರ ಬಗ್ಗೆ ನೀಡಿರುವ ತೀರ್ಪನ್ನು ಸ್ವಾಗತಿಸುವೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
Ugrappa
ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಅನರ್ಹ ಶಾಸಕರ ಬಗ್ಗೆ ನೀಡಿರುವ ತೀರ್ಪನ್ನು ಸ್ವಾಗತಿಸುವೆ. ಈಗ ಅನರ್ಹರು ಜನತಾ ನ್ಯಾಯಾಲಯದ ಮುಂದೆ ಹೋಗುತ್ತಾರೆ. ಅಲ್ಲಿ ಅವರ ಭವಿಷ್ಯ ನಿರ್ಧಾರವಾಗಲಿದೆ ಎಂದರು.
ಹಿಂದಿನ ಸರ್ಕಾರದ ಸ್ಪೀಕರ್ ರಮೇಶ್ ಕುಮಾರ್ ಅವರು ನೀಡಿರುವ ಆದೇಶಕ್ಕೆ ಉತ್ತಮ ಪ್ರತಿಕ್ರಿಯೆಯನ್ನು ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದೆ. ಉಪ ಚುನಾವಣೆ ಆಗೋವರೆಗೂ ಅನರ್ಹರೇ ಅವರು. ಜನತಾ ನ್ಯಾಯಾಲಯದಲ್ಲಿ ಯಾವ ರೀತಿಯ ತೀರ್ಪು ಬರಲಿದೆ ಅನ್ನೋದನ್ನ ಕಾದು ನೋಡೋಣ ಎಂದರು.