ವಿಜಯನಗರ: ಸಚಿವ ಆನಂದ್ ಸಿಂಗ್ ಬೆಂಕಿ ಹಚ್ಚುವುದಾಗಿ ಬೆದರಿಕೆ ಒಡ್ಡಿದ್ದಾರೆಂದು ಆರೋಪಿಸಿದ ಕುಟುಂಬವೊಂದು ಹೊಸಪೇಟೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಸಾಮೂಹಿಕ ಆತ್ಮಹತ್ಯೆಗೆ ಮುಂದಾದ ಘಟನೆ ಇಂದು ಸಂಜೆ ನಡೆದಿದೆ. ಮಡಿವಾಳ ಸಮಾಜಕ್ಕೆ ಸೇರಿದ ಭೂಮಿ ಒತ್ತುವರಿ ಮಾಡಿರುವ ಆರೋಪ ಪೋಲಪ್ಪ ಮೇಲಿದೆ. ಅದನ್ನು ತೆರವು ಮಾಡುವಂತೆ ಪೋಲಪ್ಪ ಮೇಲೆ ಒತ್ತಡ ಹಾಕಲಾಗಿದೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನು ಆಸ್ಪತ್ರೆಗೆ ದಾಖಲು ಮಾಡಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಘಟನೆ ನಡೆಯುವ ವೇಳೆ ಎಸ್‍ಪಿ ಕಚೇರಿಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ.
ವಿಜಯನಗರ ಎಸ್‍ಪಿ ಕಚೇರಿ ಮುಂದೆ ಕುಟುಂಬದಿಂದ ಆತ್ಮಹತ್ಯೆ ಯತ್ನ: ಸಚಿವರ ವಿರುದ್ಧ ಆರೋಪ! - Minister Anand sing
ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಕುಟುಂಬವೊಂದು ಸಾಮೂಹಿಕ ಆತ್ಮಹತ್ಯೆಗೆ ಮುಂದಾದ ಘಟನೆ ನಡೆಯಿತು.
ಬಳ್ಳಾರಿ