ಬಳ್ಳಾರಿ:ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮೋರಿಗೇರಿ ಗ್ರಾಮದಲ್ಲಿ ವಿದ್ಯುತ್ ವಾಹಕ ತಂತಿ ಸ್ಪರ್ಶಿಸಿ ರೈತ ಸಾವನ್ನಪ್ಪಿದ್ದಾನೆ.
ಬಳ್ಳಾರಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ: ರೈತ ಸಾವು - farmer death news
ವಿದ್ಯುತ್ ತಂತಿ ಸ್ಪರ್ಶಿಸಿ ರೈತನೊಬ್ಬ ಮೃತಪಟ್ಟಿದ್ದಾರೆ. ಮೋರಿಗೇರಿ ಗ್ರಾಮದ ಹೊರವಲಯದ ತನ್ನ ಜಮೀನಿನಲ್ಲಿ ಈರುಳ್ಳಿ ಬೆಳೆಗೆ ನೀರು ಹಾಯಿಸಲು ಹೋದಾಗ ಈ ಘಟನೆ ನಡೆದಿದೆ. ಮೋಟಾರ್ ಪಂಪ್ ಸಮಸ್ಯೆಯಾಗಿದ್ದರಿಂದ ತಾವೇ ರಿಪೇರಿ ಮಾಡಲು ಹೋಗಿ ವಿದ್ಯುತ್ ವಾಹಕ ತಂತಿ ಸ್ಪರ್ಶಿಸಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ರೈತ ಸಾವು
ಬಾವಿಹಳ್ಳಿ ಕಾಳಪ್ಪ (55) ಸಾವನ್ನಪ್ಪಿದ ರೈತ. ಮೋರಿಗೇರಿ ಗ್ರಾಮದ ಹೊರವಲಯದಲ್ಲಿನ ತನ್ನ ಜಮೀನಿನಲ್ಲಿ ಈರುಳ್ಳಿ ಬೆಳೆಗೆ ನೀರು ಹಾಯಿಸಲು ಹೋದಾಗ ಮೋಟಾರ್ ಪಂಪ್ ಸಮಸ್ಯೆಯಾಗಿದೆ. ಹೀಗಾಗಿ ರೈತ ಕಾಳಪ್ಪ ತಾವೇ ರಿಪೇರಿ ಮಾಡಲು ಹೋಗಿ ವಿದ್ಯುತ್ ವಾಹಕ ತಂತಿ ಸ್ಪರ್ಶಿಸಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಹಗರಿಬೊಮ್ಮನಹಳ್ಳಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ. ಈ ಕುರಿತು ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.