ಕರ್ನಾಟಕ

karnataka

ETV Bharat / state

ಆನಂದ್ ಸಿಂಗ್ ಪರ ರೈತ ಮೋರ್ಚಾ ಕಾರ್ಯಕರ್ತರಿಂದ ಮತಯಾಚನೆ - ಜೈಕಾರ ಘೋಷಣೆ ಕೂಗುವ ಮೂಲಕ ಪ್ರಚಾರ

ಉಪಚುನಾವಣಾ ಕಣ ರಂಗೇರುತ್ತಿದ್ದು, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಪರವಾಗಿ ರೈತ ಮೋರ್ಚಾ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚನೆ ಮಾಡಿದ್ದಾರೆ.

kn_01_bly_hpt elation news_vids_KA10007
ಆನಂದ್ ಸಿಂಗ್ ಪರವಾಗಿ ರೈತ ಮೋರ್ಚಾ ಕಾರ್ಯಕರ್ತರಿಂದ ಮತಯಾಚನೆ

By

Published : Nov 28, 2019, 5:49 PM IST

ವಿಜಯನಗರ:ಉಪಚುನಾವಣಾ ಕಣ ರಂಗೇರುತ್ತಿದ್ದು, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಪರ ರೈತ ಮೋರ್ಚಾ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚನೆ ಮಾಡಿದ್ದಾರೆ.

ಆನಂದ್ ಸಿಂಗ್ ಪರವಾಗಿ ರೈತ ಮೋರ್ಚಾ ಕಾರ್ಯಕರ್ತರಿಂದ ಮತಯಾಚನೆ

ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿ, ಸೀತಾರಾಮ್ ತಾಂಡ, ನಲ್ಲಾಪುರ, ಚಿನ್ನಾಪುರ ಗ್ರಾಮಗಳಲ್ಲಿ ರೈತ ಮುಖಂಡರು ಹಾಗೂ ಸ್ಥಳೀಯ ಕಾರ್ಯಕರ್ತರ ಸಮ್ಮುಖದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದರು.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅಭ್ಯರ್ಥಿ ಆನಂದ್ ಸಿಂಗ್ ಅವರಿಗೆ ಜೈಕಾರ, ಘೋಷಣೆ ಕೂಗುವ ಮೂಲಕ ಪ್ರಚಾರ ಮತಬೇಟೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಗುರುಲಿಂಗನ ಗೌಡ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಂಕರಪ್ಪ, ರೈತ ಮೋರ್ಚಾ ಪದಾಧಿಕಾರಿಗಳು, ರೈತ ಮುಖಂಡರು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ABOUT THE AUTHOR

...view details