ಬಳ್ಳಾರಿ: ಬರಮುಕ್ತ ಕರ್ನಾಟಕ ನಿರ್ಮಾಣ ಮಾಡಲು ಮತ್ತು ರಾಜ್ಯ ಸಮ್ಮಿಶ್ರ ಸರ್ಕಾರದ ವೈಪಲ್ಯ ಹಾಗೂ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸುತ್ತೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗೌರವ ಅಧ್ಯಕ್ಷ ಚಾಮರಸ ಮಾಲೀ ಪಾಟೀಲ್ ಹೇಳಿದರು. 39ನೇ ರೈತ ಹುತಾತ್ಮ ದಿನಾಚರಣೆ ಪ್ರಯುಕ್ತ ಜುಲೈ 21ರಂದು ರೈತರ ಬೃಹತ್ ಸಮಾವೇಶ ಬೆಳಗಾವಿಯಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಜು. 21ರಂದು ಬೆಳಗಾವಿಯಲ್ಲಿ ರೈತರ ಬೃಹತ್ ಸಮಾವೇಶ: ಚಾಮರಸ ಮಾಲೀ ಪಾಟೀಲ್ - undefined
ಬರಮುಕ್ತ ಕರ್ನಾಟಕ ನಿರ್ಮಾಣ ಮಾಡಲು ಮತ್ತು ರಾಜ್ಯ ಸಮ್ಮಿಶ್ರ ಸರ್ಕಾರದ ವೈಪಲ್ಯ ಹಾಗೂ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸುತ್ತೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗೌರವ ಅಧ್ಯಕ್ಷ ಚಾಮರಸ ಮಾಲೀ ಪಾಟೀಲ್ ಹೇಳಿದರು.
ಚಾಮರಸ ಮಾಲೀ ಪಾಟೀಲ್
ನಗರದ ಖಾಸಗಿ ಹೋಟಲ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೇಂದ್ರ ಸಿಂಗ್ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಎಸ್.ಆರ್.ಹೀರೆಮಠ, ಅಡ್ವೋಕೇಟ್ ಜನರಲ್ ರವೀಂದ್ರ ವರ್ಮ ಕುಮಾರ್ ಹಾಗೂ ಸಾವಿರಾರು ರೈತರು ಭಾಗವಹಿಸುತ್ತಾರೆ ಎಂದು ಹೇಳಿದರು.
ಕಳೆದ ವರ್ಷ 156 ತಾಲೂಕುಗಳಲ್ಲಿ ಬರಗಾಲ ನಿರ್ಮಾಣವಾಗಿ ಮುಂಗಾರು ಮತ್ತು ಹಿಂಗಾರಿನಲ್ಲಿ ಮಳೆ ಸರಿಯಾಗಿ ಆಗದೇ ರೈತರು ಆತಂಕದಲ್ಲಿ ಇದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಬರಗಾಲ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿವೆ ಎಂದು ದೂರಿದರು.