ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಕೆಲ ರಸಗೊಬ್ಬರದ ಅಂಗಡಿಗಳಲ್ಲಿ ಸಾಮಾಜಿಕ ಅಂತರ ಮರೆತು ರೈತರು ರಸಗೊಬ್ಬರ ಖರೀದಿಗೆ ಮುಗಿಬಿದ್ದರು.
ಸಾಮಾಜಿಕ ಅಂತರ ಮರೆತು ರಸಗೊಬ್ಬರ ಖರೀದಿಗೆ ಮುಗಿಬಿದ್ದ ರೈತರು! - Bellary News
ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಕೆಲ ರಸಗೊಬ್ಬರದ ಅಂಗಡಿಗಳಲ್ಲಿ ರೈತರು ಸಾಮಾಜಿಕ ಅಂತರವನ್ನೂ ಕಾಪಾಡದೆ ರಸಗೊಬ್ಬರ ಖರೀದಿಗೆ ಮುಗಿಬಿದ್ದರು.
ಸಾಮಾಜಿಕ ಅಂತರ ಮರೆತು ರಸಗೊಬ್ಬರ ಖರೀದಿಗೆ ಮುಗಿಬಿದ್ದ ರೈತರು
ರೈತರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವನ್ನೂ ಕಾಪಾಡಿಕೊಳ್ಳದೆ ಗೊಬ್ಬರ ಖರೀದಿಗೆ ಮುಂದಾಗಿದ್ದಾರೆ. ರೈತರು ರಸಗೊಬ್ಬರದ ಖರೀದಿಗೆ ಮುಗಿಬೀಳುತ್ತಿದ್ದರೂ ಕೃಷಿ ಇಲಾಖೆಯಾಗಲಿ ಅಥವಾ ರಸಗೊಬ್ಬರದ ಅಂಗಡಿಯ ಮಾಲೀಕರಾಗಲಿ ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಿಲ್ಲ.
ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿದೆ.