ಹೊಸಪೇಟೆ:ತುಂಗಭದ್ರಾ ಜಲಾಶಯಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬಾಗಿನ ಅರ್ಪಿಸಲಾಯಿತು.
ತುಂಗಭದ್ರಾ ಜಲಾಶಯಕ್ಕೆ ರೈತರಿಂದ ಬಾಗಿನ ಅರ್ಪಣೆ - ಬಾಗೀನ ಅರ್ಪಣೆ
ತುಂಗಭದ್ರಾ ಜಲಾಶಯಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಇಂದು ಬಾಗಿನ ಅರ್ಪಿಸಲಾಯಿತು.
ತುಂಗಭದ್ರಾ ಜಲಾಶಯಕ್ಕೆ ತುಂಗಭದ್ರಾ ಜಲಾಶಯಕ್ಕೆ ರೈತರಿಂದ ಬಾಗೀನರೈತರಿಂದ ಬಾಗೀನ
ಇದಕ್ಕೂ ಮುನ್ನ ತುಂಗಭದ್ರಾ ಜಲಾಶಯಕ್ಕೆ ಪೂಜೆ ಸಲ್ಲಿಸಲಾಯಿತು. ಈ ವೇಳೆ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ. ಕಾರ್ತಿಕ್ ಅವರು ಮಾತನಾಡಿ, ಸತತ ಮೂರು ವರ್ಷಗಳಿಂದ ತುಂಗಭದ್ರಾ ಜಲಾಶಯ ಭರ್ತಿಯಾಗುತ್ತಿದೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೆ ಸಂತಸ ಉಂಟುಮಾಡಿದೆ. ಇನ್ನು ಮುಂದಿನ ದಿನಗಳಲ್ಲಿ ಜಲಾಶಯಕ್ಕೆ ನೀರು ಹರಿದು ಬರಲಿದ್ದು, ಎರಡನೇ ಬೆಳೆಗೂ ಕೂಡ ನೀರು ಸಿಗುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಂಘದ ತಾಲೂಕು ಅಧ್ಯಕ್ಷ ಸಣ್ಣಕ್ಕಿ ರುದ್ರಪ್ಪ, ಮುಖಂಡರಾದ ಟಿ. ನಾಗರಾಜ್, ಬಿ.ವಿ. ಗೌಡ ಇನ್ನಿತರರಿದ್ದರು.