ಕರ್ನಾಟಕ

karnataka

ETV Bharat / state

ರೈತ ಸಂಘದ ಕಾರ್ಯದರ್ಶಿ ಮೇಲೆ ಅತ್ಯಾಚಾರ ಯತ್ನ ಆರೋಪ: ಕ್ರಮಕ್ಕೆ ಪೊಲೀಸರ ಹಿಂದೇಟು?

ರೈತ ಸಂಘರ್ಷ ಸಮಿತಿ ಕಾರ್ಯದರ್ಶಿ ಮೇಲೆ ಏಳು ಮಂದಿ ದುಷ್ಕರ್ಮಿಗಳ ತಂಡದಿಂದ ಅತ್ಯಾಚಾರ ಯತ್ನ ಆರೋಪ ಕೇಳಿ ಬಂದಿದೆ. ಈ ಬಗ್ಗೆ ದೂರು ದಾಖಲಿಸಿದರೂ, ಹಿರೇಹಡಗಲಿ ಠಾಣಾ ಪೊಲೀಸರು ಕ್ರಮ ಕೈಗೊಳ್ಳುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆಂದು ಸಂತ್ರಸ್ತೆ ಆರೋಪಿಸಿದ್ದಾರೆ.

Police Hesitates to action
ರೈತ ಸಂಘದ ಕಾರ್ಯದರ್ಶಿ ಮೇಲೆ ಅತ್ಯಾಚಾರಕ್ಕೆ ಯತ್ನ

By

Published : Oct 10, 2020, 5:50 PM IST

Updated : Oct 10, 2020, 6:23 PM IST

ಬಳ್ಳಾರಿ: ಹೂವಿನಹಡಗಲಿ ತಾಲೂಕಿನ ಹೊಳಲು ಗ್ರಾಮ ಹೊರವಲಯದಲ್ಲಿ ರೈತ ಸಂಘರ್ಷ ಸಮಿತಿ ಕಾರ್ಯದರ್ಶಿ ಮೇಲೆ ಏಳು ಮಂದಿ ದುಷ್ಕರ್ಮಿಗಳ ತಂಡ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಹಿರೇಹಡಗಲಿ ಪೊಲೀಸ್ ಠಾಣೆಗೆ ದೂರು ನೀಡಿದರೂ ಆರೋಪಿಗಳನ್ನು ಬಂಧಿಸದೆ ಇರೋದಕ್ಕೆ ಸಂತ್ರಸ್ತೆ ಮನನೊಂದು, ಫೇಸ್​ಬುಕ್ ಲೈವ್​ನಲ್ಲಿ ತನ್ನ ನೋವು ತೋಡಿಕೊಂಡಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆ, ಏಳು ಮಂದಿ ವಿರುದ್ಧ ಎಫ್​ಐಆರ್ ದಾಖಲಾಗಿ ತಿಂಗಳು ಕಳೆದಿದೆ. ಆದರೆ, ಪೊಲೀಸರು ಈವರೆಗೆ ಯಾರನ್ನೂ ಬಂಧಿಸಿಲ್ಲ ಅಂತಾ ಕಣ್ಣೀರು ಹಾಕಿದ್ದಾರೆ. ಆರೋಪಿಗಳೊಂದಿಗೆ ಪೊಲೀಸರು ಶಾಮೀಲಾಗಿದ್ದು, ಅವರನ್ನು ರಕ್ಷಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ನಾನು ರೈತ ಪರ ಹೋರಾಟ ಮಾಡಿದ್ದೀನಿ. ನನಗೆ ಈ ರೀತಿ ಅನ್ಯಾಯವಾಗಿದೆ. ಹಳೆ ದ್ವೇಷದ ಹಿನ್ನೆಲೆ ಈ ಕೃತ್ಯವೆಸಗಿದ್ದಾರೆ ಎಂದು ಜಾಲತಾಣಗಳಲ್ಲಿ ಅಳಲು ತೋಡಿಕೊಂಡಿದ್ದಾರೆ.

ರೈತ ಸಂಘದ ಕಾರ್ಯದರ್ಶಿ ಮೇಲೆ ಅತ್ಯಾಚಾರ ಯತ್ನ ಆರೋಪ.. ಸಂತ್ರಸ್ತೆ ಪ್ರತಿಕ್ರಿಯೆ

ಘಟನೆಯ ವಿವರ:

ಸೆಪ್ಟೆಂಬರ್ 5 ರಂದು ಕೊಟ್ಟಿಗೆಯಲ್ಲಿ ಹಸುಗಳಿಂದ ಹಾಲು ಕರೆಯುವಾಗ ಏಳು ಜನ ದುಷ್ಕರ್ಮಿಗಳು ಮಹಿಳೆ ಮೈಮೇಲೆ ಎರಗಿದ್ದಾರೆ. ಆ ವೇಳೆ ಮಹಿಳೆ ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಆಕೆಯ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ತೀವ್ರ ಗಾಯಗೊಂಡಿದ್ದವಳಿಗೆ, ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಈ ಕುರಿತು ಸೆಪ್ಟೆಂಬರ್‌ 14 ರಂದು ಸಂತ್ರಸ್ತೆ ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಕೊಲೆ ಹಾಗೂ ಅತ್ಯಾಚಾರಕ್ಕೆ ಯತ್ನ ಎಂಬ ಆರೋಪದಡಿ ಪ್ರಕರಣ ದಾಖಲಿಸಿದ್ದರು.

ಕೇಸು ದಾಖಲಾದವರ ವಿವರ:

1. ಅಂಜಿನಪ್ಪ

2. ಶಿವು ಈರಮ್ಮನವರ್

3. ಹನುಮಂತಪ್ಪ

4. ಸುಭಾಷ್

5. ಬಸಪ್ಪ

6. ಲಕ್ಕಪ್ಪ

7. ಹನುಮಂತ

Last Updated : Oct 10, 2020, 6:23 PM IST

ABOUT THE AUTHOR

...view details