ಕರ್ನಾಟಕ

karnataka

ETV Bharat / state

ಕೌಟುಂಬಿಕ ಕಲಹ: ಅತ್ತೆ ತಲೆ ಮೇಲೆ ಕಲ್ಲು ಎತ್ತಿ ಹಾಕಿದ ಸೊಸೆ!

ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಲಿಂಗನಾಯಕನ ಹಳ್ಳಿ ತಾಂಡಾದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಅತ್ತೆ ಶಾಂತಿಬಾಯಿ ಎಂಬುವವರ ತಲೆಗೆ ಸೊಸೆ ಲಕ್ಷ್ಮಿಬಾಯಿ ಕಲ್ಲು ಎತ್ತಿ ಹಾಕಿದ್ದಾರೆ. ತೀವ್ರವಾಗಿ ಗಾಯಗೊಂಡ ಶಾಂತಿಬಾಯಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಸೊಸೆ

By

Published : Oct 20, 2019, 3:05 PM IST

ಬಳ್ಳಾರಿ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಲಿಂಗನಾಯಕನ ಹಳ್ಳಿ ತಾಂಡಾದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅತ್ತೆ ತಲೆಯ ಮೇಲೆ ಸೊಸೆ ಕಲ್ಲು ಎತ್ತಿ ಹಾಕಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಸೊಸೆ

ಹೂವಿನ ಹಡಗಲಿ ತಾಲೂಕಿನ ಲಿಂಗನಾಯಕನಹಳ್ಳಿ ತಾಂಡಾದ ಶಾಂತಿಬಾಯಿ ಎಂಬ ವೃದ್ಧೆ ಗಂಭೀರವಾಗಿ ಗಾಯಗೊಂಡವರೆಂದು ಗುರುತಿಸಲಾಗಿದೆ.ಶಾಂತಿಬಾಯಿ ಎರಡನೇ ಮಗ ರಮೇಶನಾಯ್ಕನ ಪತ್ನಿ ಲಕ್ಷ್ಮಿಬಾಯಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡ ಶಾಂತಿಬಾಯಿ ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕೌಟುಂಬಿಕ ಕಲಹದಿಂದ ಅತ್ತೆ-ಸೊಸೆಯ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಅದು ವಿಕೋಪಕ್ಕೆ ತಿರುಗಿ ಸೊಸೆ ಲಕ್ಷ್ಮಿಬಾಯಿ ಅತ್ತೆ ತಲೆಯ ಮೇಲೆ ಕಲ್ಲು ಎತ್ತಿ ಹಾಕಿದ್ದಾಳೆ. ಜೊತೆಗೆ ಮನೆಯಲ್ಲಿದ್ದ ಸಿಮೆಂಟಿನ ಒಡೆದ ಸೀಟಿನಿಂದ ಬಲವಾಗಿ ತಲೆಗೆ ಹೊಡೆದಿದ್ದಾಳೆ ಎನ್ನಲಾಗಿದೆ. ಈ ಕುರಿತು ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details