ಬಳ್ಳಾರಿ :ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಯನ್ನ ವಿರೋಧಿಸಿ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ಕೈಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿಯು ಈ ದಿನ 27ನೇ ದಿನಕ್ಕೆ ಕಾಲಿಟ್ಟಿದೆ.
ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿ ಹೋರಾಟ : ವಿಶ್ವಕರ್ಮ ವಿಕಾಸ ವೇದಿಕೆ ಬೆಂಬಲ - Opposition to division of Bellary district
ಕೇವಲ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಹಿತಕ್ಕೋಸ್ಕರ ಈ ಜಿಲ್ಲೆಯನ್ನ ವಿಭಜನೆ ಮಾಡಲು ರಾಜ್ಯ ಸರ್ಕಾರ ಹೊರಟಿದೆ. ಭಾಷಾವಾರು ವಿಂಗಡಣೆ ವೇಳೆ ಜಿಲ್ಲೆಯನ್ನ ಅಖಂಡವಾಗಿಯೇ ಉಳಿಸಲಾಗಿತ್ತು..
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಎದುರು ಧರಣಿ ಕುಳಿತಿದ್ದ ನಾನಾ ಸಂಘಟನೆಗಳ ಮುಖಂಡರೊಂದಿಗೆ ಜಿಲ್ಲಾ ವಿಶ್ವಕರ್ಮ ವಿಕಾಸ ವೇದಿಕೆ ಹಾಗೂ ಬಳ್ಳಾರಿ ಲೈಟಿಂಗ್ ಅಂಡ್ ಸೌಂಡ್ಸ್ ಸಿಸ್ಟಮ್ ಅಸೋಸಿಯೇಷನ್ ಪದಾಧಿಕಾರಿಗಳು ಈ ದಿನ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.
ಕೇವಲ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಹಿತಕ್ಕೋಸ್ಕರ ಈ ಜಿಲ್ಲೆಯನ್ನ ವಿಭಜನೆ ಮಾಡಲು ರಾಜ್ಯ ಸರ್ಕಾರ ಹೊರಟಿದೆ. ಭಾಷಾವಾರು ವಿಂಗಡಣೆ ವೇಳೆ ಜಿಲ್ಲೆಯನ್ನ ಅಖಂಡವಾಗಿಯೇ ಉಳಿಸಲಾಗಿತ್ತು. ಹೀಗಾಗಿ, ಪ್ರತ್ಯೇಕ ವಿಜಯನಗರ ಜಿಲ್ಲೆಯನ್ನಾಗಿಸೋದು ತರವಲ್ಲ ಎಂದು ಯುವ ಮುಖಂಡ ಬಿ ಎಂ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.