ಬಳ್ಳಾರಿ :ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಕಾರ್ಯ ನಿನ್ನೆಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆಯಿತು.
ಬಳ್ಳಾರಿ ಲೋಕ ಕಣದಲ್ಲಿ ಅಂತಿಮ 12 ಅಭ್ಯರ್ಥಿಗಳು.. - ಬಿಜೆಪಿ
ಬಳ್ಳಾರಿ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಕಾರ್ಯ ನಿನ್ನೆಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಏಪ್ರಿಲ್ 8 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಜಿಲ್ಲಾ ಚುನಾವಣಾಧಿಕಾರಿ ಡಾ.ವಿ. ರಾಮಪ್ರಸಾತ್ ಮನೋಹರ, ರಾಜ್ಯ ಚುನಾವಣಾ ಆಯೋಗದಿಂದ ನಿಯೋಜನೆಗೊಂಡ ಸಾಮಾನ್ಯ ವೀಕ್ಷಕರಾದ ಅಶುತೋಷ ಅವಸ್ತಿ, ಶಿಯೋ ಶೇಖರ್ ಶುಕ್ಲಾ ಅವರ ಸಮಕ್ಷಮದಲ್ಲಿ ಈ ನಾಮಪತ್ರಗಳ ಪರಿಶೀಲನೆ ಕಾರ್ಯವು ಜರುಗಿತು. ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಈ ವೇಳೆ ಉಪಸ್ಥಿತರಿದ್ದರು.
ಪಕ್ಷೇತರ ಅಭ್ಯರ್ಥಿ ಚೌಡಪ್ಪ ಹಾಗೂ ಬಿಜೆಪಿಯ ವೈ. ಅಣ್ಣಪ್ಪ ಅವರ ನಾಮಪತ್ರಗಳು ಕ್ರಮಬದ್ಧವಾಗಿರದ ಕಾರಣ ಅವುಗಳನ್ನು ಜಿಲ್ಲಾ ಚುನಾವಣಾಧಿಕಾರಿಯವರು ತಿರಸ್ಕೃತಗೊಳಿಸಲಾಗಿದೆ ಎಂದು ಸಭೆಯಲ್ಲಿ ಘೋಷಿಸಿದರು. ಕಾಂಗ್ರೆಸ್, ಬಿಜೆಪಿ, ಬಿಎಸ್ಪಿ ಸೇರಿದಂತೆ ಒಟ್ಟು 12 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ. ಏಪ್ರಿಲ್ 8 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.