ವಿಜಯನಗರ:ಎಗ್ರೈಸ್ ಅಂಗಡಿಯಲ್ಲಿ ಅಗ್ನಿ ಅವಘಡ ಉಂಟಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಬಳಿಯ ಸಂಕ್ಲಾಪುರದಲ್ಲಿ ನಡೆದಿದೆ. 28 ವರ್ಷದ ಶಿವಪ್ಪ, 23 ವರ್ಷದ ಶ್ರೀಕಾಂತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೊಂಡ ಬೋರಯ್ಯ ಎಂಬುವವರ ಎಗ್ರೈಸ್ ಅಂಗಡಿಯಲ್ಲಿ ಮೊದಲು ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಈ ವೇಳೆ ಬೆಂಕಿ ನಂದಿಸುವಾಗ ಸಿಲಿಂಡರ್ ಸ್ಫೋಟಗೊಂಡಿದೆ. ಬೆಂಕಿ ಬಿದ್ದ ಘಟನೆ ನೋಡಲು ಬಂದಿದ್ದ ಶಿವಪ್ಪ, ಶ್ರೀಕಾಂತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.