ಬಳ್ಳಾರಿ:ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನಲ್ಲಿ ನಡೆದಿದೆ.
ಮೆಣಸಿನಕಾಯಿ ಬೆಳೆ ಕೈಹಿಡಿಯದೆ ಹೆಚ್ಚಾದ ಸಾಲದ ಉರಿ.. ನೇಣಿಗೆ ಕೊರಳೊಡ್ಡಿದ ಅನ್ನದಾತ! - KOLURU FARMER SUICIDE NEWS
ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಿಲ್ಲೆಯ ಕುರುಗೋಡು ತಾಲೂಕಿನ ಕೋಳೂರು ಗ್ರಾಮದ ನಿವಾಸಿ ಜಯರಾಮ ರೆಡ್ಡಿ (35) ನೇಣಿಗೆ ಶರಣಾದ ವ್ಯಕ್ತಿಯೆಂದು ಗುರುತಿಸಲಾಗಿದೆ. ಕೋಳೂರು ಗ್ರಾಮದ ಸರ್ಕಾರಿ ಆಸ್ಪತ್ರೆಯ ಹಿಂಭಾಗದಲ್ಲಿರುವ ಬೇವಿನ ಮರಕ್ಕೆ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಮೃತ ಜಯರಾಮ ಕೋಳೂರು ಸಹಕಾರಿ ಸಂಘದಲ್ಲಿ ಸುಮಾರು1.35 ಲಕ್ಷ ರೂ. ಸಾಲ ಮಾಡಿದ್ದರು. ಮೂರು ಎಕರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಬೆಳೆದಿದ್ದರು. ಸಮರ್ಪಕ ಮಳೆಯಿಲ್ಲದೇ ಬೆಳೆ ಸಂಪೂರ್ಣವಾಗಿ ಒಣಗಿ ಹೋಗಿತ್ತು. ಇದರಿಂದ ಮನನೊಂದು ರೈತ ಜಯರಾಮ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಘಟನಾ ಸ್ಥಳಕ್ಕೆ ಕುರುಗೋಡು ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
TAGGED:
KOLURU FARMER SUICIDE NEWS