ಬಳ್ಳಾರಿ: ಕೊರೊನಾ ವೈರಸ್ ಹರಡದಂತೆ ತಡೆಯಲು ಹೋರಾಡುತ್ತಿರುವ ಪೊಲೀಸರು, ವೈದ್ಯಕೀಯ ಸಿಬ್ಬಂದಿ ಹಾಗೂ ಎಲ್ಲಾ ಕಾರ್ಯಕರ್ತರಿಗೆ ದೇಶವ್ಯಾಪಿ ಶ್ಲಾಘನೆ ವ್ಯಕ್ತವಾಗ್ತಿದೆ. ಲಾಕ್ಡೌನ್ ನಡುವೆಯೂ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಲಾಗುತ್ತಿದೆ.
ಕೊರೊನಾ ವಾರಿಯರ್ಸ್ಗೆ ಹಣ್ಣು ವಿತರಿಸಿ ಹುಟ್ಟುಹಬ್ಬ ಆಚರಣೆ - ಹಣ್ಣು ವಿತರಣೆ
ಲಾಕ್ಡೌನ್ನಲ್ಲಿ ಸುಡು ಬಿಸಿಲನ್ನೂ ಲೆಕ್ಕಿಸದೆ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ, ಗೃಹರಕ್ಷಕ ದಳ, ವೈದ್ಯಕೀಯ ಸಿಬ್ಬಂದಿಗೆ ತನ್ನ ಮಗನ ಹುಟ್ಟುಹಬ್ಬದಂದು ಹಣ್ಣು ವಿತರಿಸಿ ವ್ಯಕ್ತಿಯೊಬ್ಬರು ಮಾದರಿಯಾಗಿದ್ದಾರೆ.
ಈ ನಡುವೆ ಬಳ್ಳಾರಿಯ ಗಾಂಧಿ ನಗರದ ಡಿ.ಶಿವಪ್ರಸಾದ್ ಎಂಬುವವರು ತಮ್ಮ ಮಗನ ಹುಟ್ಟುಹಬ್ಬವನ್ನು ವಿಭಿನ್ನ ರೀತಿಯಲ್ಲಿ ಆಚರಿಸಿ ಮಾದರಿಯಾಗಿದ್ದಾರೆ. ಇಲ್ಲಿನ ಕ್ಲಾಸಿಕ್ ಭವನದ ಮಾಲೀಕರಾದ ಶಿವಪ್ರಸಾದ್ ತಮ್ಮ ಮಗ ಕೌಶಿಕ್ ಹುಟ್ಟುಹಬ್ಬದಂದು ಲಾಕ್ಡೌನ್ ವೇಳೆ ಸೇವೆ ಸಲ್ಲಿಸುತ್ತಿರುವ ಪೊಲೀಸರು, ಗೃಹರಕ್ಷಕ ದಳ, ವೈದ್ಯಕೀಯ ಸಿಬ್ಬಂದಿ, ಮಾಧ್ಯಮದವರಿಗೆ ಹಣ್ಣು, ನೀರು ವಿತರಿಸಿ ಮಾದರಿಯಾಗಿದ್ದಾರೆ.
ನಗರದ ಎಸ್.ಪಿ ಸರ್ಕಲ್, ದುರ್ಗಮ್ಮ ಗುಡಿ, ರಾಯಲ್ ವೃತ್ತ, ಮೋತಿ ವೃತ್ತ, ಸಂಗಮ್ ಸರ್ಕಲ್ಗಳಲ್ಲಿ ಕಾರ್ಯನಿರ್ವಹಿಸುವ ಪೊಲೀಸರು, ಗೃಹರಕ್ಷಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಉಚಿತವಾಗಿ ಹಣ್ಣು ವಿತರಣೆ ಮಾಡಿದರು. ಈ ಸಮಯದಲ್ಲಿ ಈಟಿವಿ ಭಾರತದೊಂದಿಗೆ ಸನ್ಮಾರ್ಗ ಗೆಳೆಯರ ಬಳಗದ ಖಜಾಂಚಿ ಕಪ್ಪಗಲ್ಲು ಚಂದ್ರಶೇಖರ್ ಆಚಾರ್ ಮಾತನಾಡಿ, ಉಚಿತವಾಗಿ ಪೊಲೀಸರಿಗೆ, ಮಾಧ್ಯಮದವರಿಗೆ, ವೈದ್ಯಕೀಯ ಸಿಬ್ಬಂದಿಗೆ ಅವರು ಕೆಲಸ ಮಾಡುವ ಸ್ಥಳಗಳಿಗೆ ಹೋಗಿ ಹಣ್ಣುಗಳನ್ನು ವಿತರಣೆ ಮಾಡಿದ್ದು ವಿಶೇಷವಾಗಿದೆ ಎಂದಿದ್ದಾರೆ.