ಹೊಸಪೇಟೆ:ಪೌರಕಾರ್ಮಿಕರ ಮಕ್ಕಳು ಉನ್ನತ ಉದ್ಯೋಗ ಪಡೆದುಕೊಳ್ಳಬೇಕು. ಸರ್ಕಾರ ನೀಡುವ ಪ್ರತಿಯೊಂದು ಯೋಜನೆಗಳನ್ನು ಉಪಯೋಗಿಸಿಕೊಂಡು ಜೀವನದಲ್ಲಿ ಮುಂದೆ ಬರಬೇಕು. ತಂದೆ, ತಾಯಿಗೆ ಗೌರವ ನೀಡುವಂತಹ ಕೆಲಸವನ್ನು ಮಾಡಬೇಕು. ವಿದ್ಯಾರ್ಥಿಗಳು ಸಮಯವನ್ನು ಹಾಳು ಮಾಡಬಾರದು. ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಂಡು ಎಲ್ಲರಿಗೂ ಸ್ಫೂರ್ತಿಯಾಗಬೇಕು ಎಂದು ನಗರಸಭೆ ಆಯುಕ್ತೆ ಜಯಲಕ್ಷ್ಮೀ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಬಿಇ-ಎಂಬಿಬಿಎಸ್ ಓದುತ್ತಿರುವ ಪೌರಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ - ಉಚಿತ ಲ್ಯಾಪ್‌ಟಾಪ್ ವಿತರಣೆ
ನಗರಸಭೆಯ ಕಾರ್ಯಾಲಯದಲ್ಲಿ ಇಂದು ಬಿಇ ಮತ್ತು ಎಂಬಿಬಿಎಸ್ ವ್ಯಾಸಂಗ ಮಾಡುವ ಪೌರಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಲಾಗಿದೆ.
ನಗರಸಭೆಯ ಕಾರ್ಯಾಲಯದಲ್ಲಿ ಇಂದು ಬಿಇ ಮತ್ತು ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ಪೌರಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ ಆಯೋಜನೆಯ ಕಾರ್ಯಕ್ರಮದಲ್ಲಿ ಅವರು ನುಡಿದರು. ಮೀಸಲಾತಿ ಅನುದಾನದಲ್ಲಿ ಸರ್ಕಾರದ ಸುತ್ತೋಲೆ ಅನ್ವಯ ಬಿಇ ಮತ್ತು ಎಂಬಿಬಿಎಸ್ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪೌರಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಲ್ಯಾಪ್ಟಾಪ್ಅನ್ನು ಅವರ ಶೈಕ್ಷಣಿಕ ಅಭಿವೃದ್ಧಿಗಾಗಿ ನೀಡಲಾಗುತ್ತಿದೆ.
ನಿತಿನ್ ಹೆಚ್. (ಎಲೆಕ್ಟ್ರಿಕಲ್ ಎಂಜಿನಿಯರಿಂಗ್) ಪ್ರೌಢ ದೇವರಾಯ ಎಂಜಿನಿಯರಿಂಗ್ ಕಾಲೇಜ್ ಹೊಸಪೇಟೆ ಹಾಗೂ ಶ್ರೀನಿವಾಸ ಹೆಚ್.ಎನ್.( ಮೆಕ್ಯಾನಿಕಲ್ ಎಂಜಿನಿಯರಿಂಗ್) ಎಂ.ಎಸ್. ರಾಮಯ್ಯ ಎಂಜಿನಿಯರಿಂಗ್ ಕಾಲೇಜು ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರಿಗೆ ಸರ್ಕಾರದ ಅನುದಾನದಲ್ಲಿ ಲ್ಯಾಪ್‌ಟಾಪ್ ನೀಡಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.