ಬಳ್ಳಾರಿ : ಕ್ರಿಯಾ ಯೋಜನೆಯ ಅಡಿಯಲ್ಲಿ ಗಣಿನಾಡು ಬಳ್ಳಾರಿಗೆ 25 ಕೋಟಿ ರೂ. ಅನುದಾನವನ್ನು ಬಳ್ಳಾರಿ ಜಿಲ್ಲಾಡಳಿತ ಬಿಡುಗಡೆ ಮಾಡಿದೆ ಎಂದು ಬಳ್ಳಾರಿ ಲೋಕಸಭಾ ಅಭ್ಯರ್ಥಿ ವಿ.ಎಸ್ ಉಗ್ರಪ್ಪ ತಿಳಿಸಿದರು.
ನಗರದ ಹೊರವಲಯದ ಗುಗ್ಗುರಟ್ಟಿಯ ಹೊಸ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ರಿಯಾ ಯೋಜನೆಯ ಅಡಿಯಲ್ಲಿ ಗಡಿನಾಡಿಗೆ 25 ಕೋಟಿ, ವಿಮ್ಸ್ಗೆ 3 ಕೋಟಿ, ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ 3 ಕೋಟಿ, ಹಂಪಿ ಅಭಿವೃದ್ಧಿಗೆ 3 ಕೋಟಿ, ಹೂವಿನ ಹಡಗಲಿಯಲ್ಲಿ ಕೆರೆಗಳ ನಿರ್ಮಾಣಕ್ಕೆ 4 ಕೋಟಿ, ಕೂಡ್ಲಿಗಿಯಲ್ಲಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ 3 ಕೋಟಿ ರೂ. ಅನುದಾನವನ್ನು ನೀಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ ಎಂದರು.
ಕ್ರಿಯಾ ಯೋಜನೆಯಡಿ ಬಳ್ಳಾರಿಗೆ 25 ಅನುದಾನ : ವಿ.ಎಸ್ ಉಗ್ರಪ್ಪ ಏಪ್ರಿಲ್ 2 ಕ್ಕೆ ನಾಮಪತ್ರ ಸಲ್ಲಿಕೆ :
ಏಪ್ರಿಲ್ 2 ಮಂಗಳವಾರ ಬೆಳಿಗ್ಗೆ ತಾಯಿ ಶ್ರೀ ಕನಕದುರ್ಗಮ್ಮ ದೇವಿಯ ಆಶೀರ್ವಾದ ಪಡೆದು ಅಲ್ಲಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಪ್ರವೇಶ ಮಾಡಿ ಮಧ್ಯಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಸುತ್ತೇವೆ ಅಂತಾ ಇದೇ ವೇಳೆ ವಿ.ಎಸ್ ಉಗ್ರಪ್ಪ ಹೇಳಿದರು.
ಈ ಸಮಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಮಂತ್ರಿಗಳು, ಸಂಸದರು ಆಗಮಿಸುತ್ತಾರೆ. ಪಕ್ಷದ ಹಿರಿಯ ನಾಯಕರು, ಮುಖಂಡರು, ಕಾರ್ಯಕರ್ತರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಗೋಡೆ ಬರಹಕ್ಕೆ ಸೀಮಿತವಾಗಿದೆ. ಪ್ಯಾರಾ ಮಿಲಿಟರ್ ಪಡೆಯನ್ನು ಬಳಸಿಕೊಂಡು ರಾಜ್ಯದಲ್ಲಿ ತೆರಿಗೆ ಇಲಾಖೆ ಕಾರ್ಯವನ್ನು ನಿರ್ವಹಿಸುತ್ತದೆ. ಈ ತೆರಿಗೆ ಇಲಾಖೆ ಕಾಂಗ್ರೆಸ್ ಮತ್ತು ಜನತಾದಳ ಪಕ್ಷದ ರಾಜಕೀಯ ವ್ಯಕ್ತಿಗಳ ಮೇಲೆ ದಾಳಿ ಮಾಡುತ್ತದೆ. ಆದರೆ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಏಕೆ ತೆರಿಗೆ ಇಲಾಖೆ ದಾಳಿ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.