ಬಳ್ಳಾರಿ: ತಾಲೂಕಿನ ಚಿಲಗೋಡು ಗ್ರಾಮದ ಯೋಧನ ಅಂತ್ಯ ಸಂಸ್ಕಾರವನ್ನು ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
ರಸ್ತೆ ಅಪಘಾತದಲ್ಲಿ ಯೋಧ ಸಾವು: ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ - Maunesh Badiger, a soldier from Chilukodu village
ಬಡಿಗೇರ್ ಸೇನೆಗೆ ಸೇರಿ 9 ವರ್ಷಗಳಾಗಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ 9 ತಿಂಗಳುಗಳಿಂದ ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ಶುಕ್ರವಾರ ಅಪಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಬಳ್ಳಾರಿ ಜಿಲ್ಲೆಯಲ್ಲಿಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಬಳ್ಳಾರಿಯಲ್ಲಿ ಅಪಘಾತ ಸಂಭವಿಸಿ ಯೋಧ ಸಾವು
ಮೌನೇಶ್ ಬಡಿಗೇರ್ (26) ಮೃತ ಯೋಧ. ಶುಕ್ರವಾರ ರಾತ್ರಿ ಹಗರಿಬೊಮ್ಮನಹಳ್ಳಿ ತಾಲೂಕಿನ ಅಂಕಸಮುದ್ರ ಬಳಿಯ ರಸ್ತೆಯಲ್ಲಿ ಹೊಸಪೇಟೆ ಕಡೆಯಿಂದ ಬೈಕ್ನಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಡಿಗೇರ್ ಸೇನೆಗೆ ಸೇರಿ 9 ವರ್ಷಗಳಾಗಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ 9 ತಿಂಗಳುಗಳಿಂದ ಸೇವೆ ಸಲ್ಲಿಸುತ್ತಿದ್ದರು. ರಜೆಯ ಮೇಲೆ ಊರಿಗೆ ಬಂದಿದ್ದ ಮೌನೇಶ್ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.
Last Updated : Nov 24, 2019, 5:55 PM IST