ಕರ್ನಾಟಕ

karnataka

ETV Bharat / state

G20 Meeting: ಹಂಪಿಯಲ್ಲಿ ಶೆರ್ಪಾಗಳಿಂದ ಯೋಗಾಭ್ಯಾಸ, ಹರಿಗೋಲು ಸವಾರಿ

ಹಂಪಿಯ ಚಕ್ರತೀರ್ಥದ ತುಂಗಭದ್ರಾ ನದಿಯಲ್ಲಿ ಹರಿಗೋಲು ಸವಾರಿ ಕೈಗೊಂಡ ಜಿ20 ಶೆರ್ಪಾಗಳು ಹಂಪಿಯ ಕಲ್ಲುಬಂಡೆ, ನದಿಯ ಪ್ರಾಕೃತಿಕ ಸೌಂದರ್ಯ ಸವಿದರು.

G20 Meeting  at Hampi
ಶೆರ್ಪಾಗಳಿಂದ ಯೋಗಾಭ್ಯಾಸ, ಹರಿಗೋಲು ಸವಾರಿ

By

Published : Jul 16, 2023, 5:25 PM IST

ಜಿ20 ಶೆರ್ಪಾಗಳಿಂದ ಹರಿಗೋಲು ಸವಾರಿ

ವಿಜಯನಗರ: ಜಿ20 ಸಭೆಗೆ ಆಗಮಿಸಿರುವ ಶೆರ್ಪಾಗಳಿಗೆ ವಿಶ್ವವಿಖ್ಯಾತ ಹಂಪಿಯ ಪುರಂದರದಾಸರ ಮಂಟಪದಲ್ಲಿ ಇಂದು ಬೆಳಗ್ಗೆ ಯೋಗಾಭ್ಯಾಸ ಮಾಡಿಸಲಾಯಿತು. ಜಿ20 ಸಭೆಯಲ್ಲಿ ಭಾಗಿಯಾದ ಶೆರ್ಪಾಗಳು ಇಂದು ಬೆಳಗ್ಗೆ ವಿಶ್ವಪಾರಂಪರಿಕ ತಾಣ ಹಂಪಿಗೆ ಭೇಟಿ ನೀಡಿದ್ದರು. ಸೂರ್ಯೋದಯಕ್ಕೂ ಮುನ್ನ ತುಂಗಭದ್ರಾ ನದಿ ದಡದಲ್ಲಿರುವ ಪುರಂದರ ಮಂಟಪದಲ್ಲಿ ಯೋಗಾಭ್ಯಾಸ ಮಾಡಿದರು.

ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜಿ-20 ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಸಭೆಗೆ ಆಗಮಿಸಿದ ಸದಸ್ಯ ಹಾಗೂ ಅತಿಥಿ ರಾಷ್ಟ್ರಗಳ ಅತ್ಯುನ್ನತ ಪ್ರತಿನಿಧಿಗಳು ಯೋಗಾಭ್ಯಾಸ ನಂತರ ಐತಿಹಾಸಿಕ ತುಂಗಭದ್ರಾ ನದಿಯಲ್ಲಿ ಹರಿಗೋಲು ಸವಾರಿ (ಕೊರಾಕಲ್ ರೈಡ್) ಮಾಡಿದರು. ಹಂಪಿಯ ಚಕ್ರತೀರ್ಥದ ತುಂಗಭದ್ರಾ ನದಿಯಲ್ಲಿ ಹರಿಗೋಲು ಸವಾರಿ ಕೈಗೊಂಡು ಹಂಪಿಯ ಕಲ್ಲುಬಂಡೆ, ನದಿಯ ಪ್ರಾಕೃತಿಕ ಸೌಂದರ್ಯವನ್ನು ಸವಿದರು.

ಹಂಪಿಯಲ್ಲಿ ಶೆರ್ಪಾಗಳಿಂದ ಯೋಗಾಭ್ಯಾಸ

ಹಂಪಿಯ ಸ್ಮಾರಕಗಳ ವೀಕ್ಷಣೆ:ಶೆರ್ಪಾ ಸಭೆಯ ನಂತರ ಶುಕ್ರವಾರ(ಜು.14) ಸಂಜೆ ಜಿ-20 ಪ್ರತಿನಿಧಿಗಳು ವಿಶ್ವವಿಖ್ಯಾತ ಹಂಪಿಯ ಸ್ಮಾರಕಗಳನ್ನು ವೀಕ್ಷಣೆ ಮಾಡಿದ್ದರು. ಪ್ರವಾಸೋದ್ಯಮ ಇಲಾಖೆ, ಕೇಂದ್ರ ಮತ್ತು ರಾಜ್ಯ ಪುರಾತತ್ವ ಇಲಾಖೆಯಿಂದ ಸ್ಮಾರಕ ವೀಕ್ಷಣೆ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಹಂಪಿಯ ಮಹಾನವಮಿ ದಿಬ್ಬ, ಹಜಾರರಾಮ, ಕಮಲ ಮಹಲ್ ಹಾಗೂ ಗಜಶಾಲೆ, ರಾಣಿ ಅರಮನೆ ಅಧಿಷ್ಠಾನ ಹಾಗೂ ವಿವಿಧ ಸ್ಮಾರಕಗಳ ಕುರಿತು ಪ್ರವಾಸಿ ಮಾರ್ಗದರ್ಶಿಗಳು ಗೌರವಪೂರಕವಾಗಿ ಸ್ವಾಗತಿಸುತ್ತ ಮಾಹಿತಿ ನೀಡಿದ್ದರು.

ಹಂಪಿಯಲ್ಲಿ ಶೆರ್ಪಾಗಳಿಂದ ಯೋಗಾಭ್ಯಾಸ

ಇದನ್ನೂ ಓದಿ:Video: ಜಿ-20 ಪ್ರತಿನಿಧಿಗಳಿಂದ ವಿಶ್ವವಿಖ್ಯಾತ ಹಂಪಿಯ ಸ್ಮಾರಕಗಳ ವೀಕ್ಷಣೆ

3ನೇ ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಸಭೆ ಉದ್ದೇಶವೇನು?:

  • ಜಿ‌20 ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಮುಖ್ಯ ಉದ್ದೇಶ ಸದಸ್ಯ ರಾಷ್ಟ್ರಗಳ ಸಾಂಸ್ಕೃತಿಕ ಅಸ್ಮಿತೆಯನ್ನು ರಕ್ಷಿಸಿ ಪುನರ್‌ ಸ್ಥಾಪಿಸುವುದಾಗಿದೆ. 1970ರ ಯುನೆಸ್ಕೋ ಒಡಂಬಡಿಕೆಯಂತೆ ಎಲ್ಲಾ ರಾಷ್ಟ್ರಗಳು ಪರಸ್ಪರ ಸಹಕಾರದಿಂದ ವಸಾಹತು ಸಮಯ ಅಥವಾ ಇನ್ನಿತರ ಮಾರ್ಗಗಳಿಂದ ತಮ್ಮ ರಾಷ್ಟ್ರದೊಳಗೆ ಆಗಮಿಸಿದ ಸಾಂಸ್ಕೃತಿಕ ಮಹತ್ವವುಳ್ಳ ಕಲಾಕೃತಿಗಳನ್ನು ಹಿಂದಿರುಗಿಸಬೇಕು. ಭಾರತವು ಸಹ ಇದಕ್ಕೆ ಬದ್ಧವಾಗಿದೆ. ಈಗಾಗಲೇ ಭಾರತ ಅಮೆರಿಕ ಸೇರಿದಂತೆ ಇತರ ರಾಷ್ಟ್ರದೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಅಮೆರಿಕ 150ಕ್ಕೂ ಹೆಚ್ಚು ಕಲಾಕೃತಿಗಳನ್ನು ಭಾರತಕ್ಕೆ ಹಿಂದಿರುಗಿಸಲಿದೆ.
  • ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ 2ನೇ ಮುಖ್ಯ ಉದ್ದೇಶವೆಂದರೆ ಜನಜೀವನದ ಜೊತೆಗೆ ಪಾರಂಪರಿಕವಾಗಿ ಬಳಕೆಗೆ ಬಂದ ಪದ್ಧತಿಗಳನ್ನು ಉಳಿಸಿ ಬೆಳೆಸುವುದಾಗಿದೆ. ಭಾರತದಲ್ಲಿ ಆಯುರ್ವೇದ ಪದ್ಧತಿ ಬಳಕೆಯಲ್ಲಿದೆ. ಹಲವಾರು ಸಂದರ್ಭದಲ್ಲಿ ಆಯುರ್ವೇದದಲ್ಲಿ ಬಳಕೆಯಲ್ಲಿದ್ದ ಔಷಧೋಪಚಾರಗಳ ಸ್ವಾಮ್ಯ ಹಕ್ಕು(ಪೇಟೆಂಟ್) ಬೇರೆಯವರ ಪಾಲಾಗಿದೆ. ಈ ರೀತಿಯ ಘಟನೆಗಳನ್ನು ತಪ್ಪಿಸುವುದು ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಕೆಲಸವಾಗಿದೆ.
  • 3ನೇ ಉದ್ದೇಶ ಸಾಂಸ್ಕೃತಿಕ ಅಂಶಗಳು, ಕಲಾ ಕುಸರಿ ಹಾಗೂ ಉದ್ದಿಮೆಗಳನ್ನು ಪ್ರಚುರ ಪಡಿಸುವುದಾಗಿದೆ. ಇದರ ಅಂಗವಾಗಿ ಹಂಪಿಯಲ್ಲಿ ಜವಳಿ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು
  • 4ನೇ ಉದ್ದೇಶ ಸಾಂಸ್ಕೃತಿಕ ಅಂಶಗಳಿಗೆ ಡಿಜಿಟಲ್ ರೂಪ ನೀಡಿ, ಆಡಿಯೋ, ವಿಡಿಯೋ ಹಾಗೂ ಇನ್ನಿತರ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವುದಾಗಿದೆ.

ಇದನ್ನೂ ಓದಿ:G20 Summit: 3ನೇ ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಸಭೆ.. ಹಂಪಿಯಲ್ಲಿ ನಾಳೆ ಜವಳಿ ವಸ್ತು ಪ್ರದರ್ಶನಕ್ಕೆ ಚಾಲನೆ

ABOUT THE AUTHOR

...view details