ವಿಜಯನಗರ:ಲಂಚ ಪಡೆಯುತ್ತಿದ್ದ ವೇಳೆ ಜೆಸ್ಕಾಂ ಸೆಕ್ಷನ್ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಹಗರಿಬೊಮ್ಮನಹಳ್ಳಿ ಪಟ್ಟಣದ ಜೆಸ್ಕಾಂ ಕಚೇರಿಯಲ್ಲಿ ಅಧಿಕಾರಿ ಹೆಚ್ ಫಕೀರಪ್ಪ ಎಂಬುವರು ಲೋಕಾಯುಕ್ತರ ದಾಳಿ ವೇಳೆ ಸಿಕ್ಕಿಬಿದ್ದಿದ್ದಾರೆ.
ಹಗರಿಬೊಮ್ಮನಹಳ್ಳಿ ತಾಲೂಕಿನ ಬಂಡಿಹಳ್ಳಿ ಗ್ರಾಮದ ನಿವಾಸಿ ರೈತ ದಾದಾಪೀರ್ ಎಂಬುವರು ನೀಡಿದ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಬಂಡಿಹಳ್ಳಿ ಗ್ರಾಮದ ಹೊಲವೊಂದರಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ ಸುಟ್ಟಿತ್ತು. ಅದನ್ನು ಬದಲಾಯಿಸಲು ಫಕೀರಪ್ಪ 15 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.