ಬಳ್ಳಾರಿ: ಜಿಂದಾಲ್ ಸಮೂಹ ಸಂಸ್ಥೆಗೆ ಅಂದಾಜು 3667 ಎಕರೆ ಭೂಮಿ ಪರಾಭಾರೆ ಮಾಡಲು ಹೊರಟಿರುವುದು ಸರಿ ಇದೆ. ಶಾಸಕ ಆನಂದ್ ಸಿಂಗ್ ವಿರೋಧ ಮಾಡುತ್ತಿರುವ ಕ್ರಮ ತಪ್ಪು ಎಂದು ಕೆಪಿಸಿಸಿ ಸತ್ಯ ಶೋಧನಾ ಸಮಿತಿ ಸದಸ್ಯ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಜಿಂದಾಲ್ಗೆ ಭೂಮಿ ವಿಚಾರ ನೆಪವೊಡ್ಡಿ ಆನಂದ್ ಸಿಂಗ್ ರಾಜೀನಾಮೆ: ಬಸವರಾಜ ರಾಯರೆಡ್ಡಿ
ಜಿಂದಾಲ್ಗೆ ಭೂಮಿ ಪರಾಭಾರೆ ಮಾಡುವುದಕ್ಕೂ ಶಾಸಕರ ರಾಜೀನಾಮೆಗೂ ಯಾವುದೇ ಸಂಬಂಧವಿಲ್ಲ. ಅದು ಒಂದು ನೆಪ ಮಾತ್ರ. 10 ವರ್ಷಗಳ ಹಿಂದೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸತ್ಯ ಶೋಧನಾ ಸಮಿತಿ ಸದಸ್ಯ ಬಸವರಾಜ ರಾಯರೆಡ್ಡಿ ಹೇಳಿದರು.
ರೋಟರಿ ವೃತ್ತದಲ್ಲಿ ಬುಧವಾರ ಬಿಜೆಪಿಯು ಆಪರೇಷನ್ ಕಮಲಕ್ಕೆ ಕೈ ಹಾಕಿದೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಘೋಷಣೆ ಕೂಗಿ, ಪ್ರತಿಭಟನೆ ನಡೆಸಲಾಯಿತು. ನಂತರ ಕೆಪಿಸಿಸಿ ಸತ್ಯ ಶೋಧನಾ ಸಮಿತಿ ಸದಸ್ಯರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ರಾಯರೆಡ್ಡಿ, ಶಾಸಕ ಆನಂದ್ ಸಿಂಗ್ ಅವರು ಜಿಂದಾಲ್ಗೆ ಭೂಮಿ ಪರಾಭಾರೆ ವಿಚಾರದ ನೆಪವೊಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ. 10 ವರ್ಷಗಳ ಹಿಂದೆ ಭೂಮಿ ಧಾರಣೆ ಪ್ರಕಾರ ಭೂಮಿಯನ್ನು ಪರಾಭಾರೆ ಮಾಡಲು ಸಚಿವ ಸಂಪುಟ ಸಭೆ ನಿರ್ಧರಿಸಿತ್ತು ಎಂದರು.
ಸ್ಥಳೀಯರಿಗೆ ಉದ್ಯೋಗ ಅವಕಾಶ ಕಲ್ಪಿಸಿ ಕೊಡದಿದ್ದರೆ ಸರ್ಕಾರ ಪರಿಶೀಲನೆ ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ ಎಂದು ತಮ್ಮ ವಾದವನ್ನು ಸಮರ್ಥಿಸಿಕೊಂಡರು.ಸತ್ಯಶೋಧನೆ ಸಮಿತಿಯು ವಿವಿಧ ಜಿಲ್ಲೆಗಳಲ್ಲಿ ಸಂಚರಿಸಿ ಲೋಕಸಭೆಯ ಸೋಲು, ಸಂಘಟಿತ ಹೋರಾಟಕ್ಕೆ ಮುನ್ನಡೆಯಲಿದೆ ಎಂದು ಹೇಳಿದರು.