ಹೊಸಪೇಟೆ : ದಲಿತರು ಕಾಂಗ್ರೆಸ್ ಪಕ್ಷಕ್ಕೆ ವೋಟ್ ಬ್ಯಾಂಕ್ ಆಗಿದ್ದಾರೆ. ದಲಿತರ ಅಭಿವೃದ್ಧಿಯನ್ನು ಕಾಂಗ್ರೆಸ್ ಪಕ್ಷ ಮಾಡಿಲ್ಲ. ಅದಕ್ಕಾಗಿ ದಲಿತರು ಭಾರತೀಯ ಜನತಾ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಹೇಳಿಕೆ ನಿಡಿದ್ದಾರೆ.
ಪಟೇಲ್ ನಗರದ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ದಲಿತ ಸಮಾವೇಶದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷಗಳು ಕಳೆದರು ದಲಿತರನ್ನು ಮುಖ್ಯಮಂತ್ರಿಯನ್ನಾಗಿ ಕಾಂಗ್ರೆಸ್ ಪಕ್ಷವು ಮಾಡಲಿಲ್ಲ. ಕಳೆದ ಸಮ್ಮಿಶ್ರ ಸರಕಾರದಲ್ಲಿ ಡಾ.ಜಿ. ಪರಮೇಶ್ವರ್ ಅವರನ್ನು ಉಪ ಮುಖ್ಯಮಂತ್ರಿಯಾಗಿ ಮಾಡಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.