ಬಳ್ಳಾರಿ:ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರದ ಗ್ರಾಪಂ ವ್ಯಾಪ್ತಿಯ ನಾಣ್ಯಾಪುರದ ನಿವಾಸಿ ಹಾಗೂ ಗ್ರಾಮ ಪಂಚಾಯತ್ ಅಭ್ಯರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಹೊಸಪೇಟೆ : ಗ್ರಾಮ ಪಂಚಾಯತ್ ಅಭ್ಯರ್ಥಿ ಆತ್ಮಹತ್ಯೆಗೆ ಶರಣು - gram panchayat candidate committed suicide
ಈತನು ಮದ್ಯವ್ಯಸನಿ ಹಾಗೂ ಮಾನಸಿಕ ಅಸ್ವಸ್ಥನಾಗಿದ್ದನು. ಇವರು ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆಗೆ ಶರಣನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ..
![ಹೊಸಪೇಟೆ : ಗ್ರಾಮ ಪಂಚಾಯತ್ ಅಭ್ಯರ್ಥಿ ಆತ್ಮಹತ್ಯೆಗೆ ಶರಣು Gram panchayath candidate commits suicide in Hospet](https://etvbharatimages.akamaized.net/etvbharat/prod-images/768-512-9999809-976-9999809-1608869406827.jpg)
ಹೊಸಪೇಟೆ: ಗ್ರಾಮ ಪಂಚಾಯಿತಿ ಅಭ್ಯರ್ಥಿ ಆತ್ಮಹತ್ಯೆಗೆ ಶರಣು
ಮಲಿಯಪ್ಪ(40) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತ್ ಅಭ್ಯರ್ಥಿಯಾಗಿದ್ದಾರೆ. ಮಲಿಯಪ್ಪ ನಾಣ್ಯಾಪುರದಿಂದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು.
ಈತನು ಮದ್ಯವ್ಯಸನಿ ಹಾಗೂ ಮಾನಸಿಕ ಅಸ್ವಸ್ಥನಾಗಿದ್ದನು. ಇವರು ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆಗೆ ಶರಣನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.