ಕರ್ನಾಟಕ

karnataka

ETV Bharat / state

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ.. - ಹೊಸಪೇಟೆ ನಗರ ಅಥಿತಿ ಉಪನ್ಯಾಸಕರು

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಹ್ರಹಿಸಿ ಹೊಸಪೇಟೆ ನಗರದಲ್ಲಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದಾರೆ.

ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ

By

Published : Oct 14, 2019, 4:59 PM IST

ಹೊಸಪೇಟೆ/ಬಳ್ಳಾರಿ:ಕನಿಷ್ಟ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಹ್ರಹಿಸಿ ಹೊಸಪೇಟೆ ನಗರದಲ್ಲಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿ, ತಹಶೀಲ್ದಾರ್​ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ನಗರದ ತಾಲೂಕ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕರು, ಸರ್ಕಾರದ ವಿರುದ್ಧ ಷೋಷಣೆ ಕೂಗಿದರು. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಎರಡು ದಶಕಗಳಿಂದ ಅಲ್ಪ ವೇತನದಲ್ಲಿಯೇ ತಮ್ಮ ಉಪನ್ಯಾಸದ ಜೀವನ ನಡೆಸುತ್ತಿದ್ದಾರೆ. ಪ್ರತಿ ತಿಂಗಳು ವೇತನ ಸರಿಯಾಗಿ ನೀಡುತ್ತಿಲ್ಲ. ಎರಡು ದಶಕಗಳಿಂದ ನಮ್ಮ ಬೇಡಿಕೆಗಳನ್ನು ಈಡೇರಿಸಿ ಎಂದು ಎಲ್ಲಾ ಸರ್ಕಾರಗಳಿಗೂ ಮನವಿ ಪತ್ರವನ್ನು ನೀಡುತ್ತಾ ಬಂದಿದ್ದೇವೆ. ಆದರೆ, ಯಾರೂ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ..

ಉಪನ್ಯಾಸಕರ ಕುಟುಂಬಗಳು ಜೀವನ ನಡೆಸದೆ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಇಂದು ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜಗಳು ಚೆನ್ನಾಗಿ ನಡೆಯುತ್ತಿವೆ ಎಂದರೆ ಅದು ಅತಿಥಿ ಉಪನ್ಯಾಸಕರಿಂದ ಎನ್ನುವುದು ಸರ್ಕಾರಕ್ಕೆ ನೆನಪಿಸುತ್ತಿದ್ದೇವೆ ಎಂದರು. ಸರ್ಕಾರವು ನಮ್ಮ ವೇತನ ಹಾಗೂ ಬೇಡಿಕೆಗಳ ವಿಷಯದ ಬಗ್ಗೆ ನಿರ್ಲಕ್ಷ್ಯ ತೋರಿದರೆ ರಾಜ್ಯದ ಎಲ್ಲಾ ಕಾಲೇಜಗಳನ್ನು ಮುಚ್ಚಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಉಪನ್ಯಾಸಕರ ಬೇಡಿಕೆಗಳು:

  • ರಾಜ್ಯದ ಎಲ್ಲಾ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕು.
  • ಪ್ರಸಕ್ತ ಸಾಲಿನ ಮೊದಲನೆ ತಿಂಗಳಿನಿಂದ 5 ಸಾವಿರ ರೂ. ವೇತನ ಹೆಚ್ಚಿಸಬೇಕು.
  • ಪ್ರತಿ ತಿಂಗಳು‌ ಸರಿಯಾದ ಸಮಯಕ್ಕೆ ವೇತನ ಪಾವತಿಯಾಗುವಂತೆ ಕ್ರಮ ಜರುಗಿಸಬೇಕು.
  • ಯುಜಿಸಿ ನಿಯಮಾನುಸಾರ ಅತಿಥಿ ಉಪನ್ಯಾಸಕರಿಗೆ ವೇತನ ಮಂಜೂರು ಮಾಡಬೇಕು.
  • ಪದವಿ ಕಾಲೇಜುಗಳಿಲ್ಲಿ ನಡೆಯುವ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅತಿಥಿ ಉಪನ್ಯಾಸಕರಿಗೆ ಮೊದಲ ಆದ್ಯತೆ ನೀಡಬೇಕು.

ABOUT THE AUTHOR

...view details