ಹೊಸಪೇಟೆ :ವಿಜಯನಗರ ಜಿಲ್ಲೆ ಘೋಷಣೆಯಾಗಿರುವುದು ಖುಷಿಯ ಸಂಗತಿ. ಹಾಗಾಗಿ, ವಿಜಯನಗರ ನೆಲಕ್ಕೆ ತಲೆಕೊಟ್ಟು ನಮಸ್ಕಾರ ಮಾಡಿದ್ದೇನೆ ಎಂದು ಹಜ್ ಮತ್ತು ವಕ್ಫ್ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಅವರು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ, ಕಂದಾಯ ಸಚಿವ ಆರ್. ಅಶೋಕ್ ಸೇರಿದಂತೆ ಎಲ್ಲರಿಗೂ ಧನ್ಯವಾದಗಳು. ಪಶ್ಚಿಮ ತಾಲೂಕುಗಳ ಜನರ ಬೇಡಿಕೆ ಈಡೇರಿದೆ ಎಂದರು.